Darshan: ಜಾಮೀನು ರದ್ದು ಭೀತಿ: ಚಾಮುಂಡಿ ತಾಯಿಯ ಮೊರೆ ಹೋದ ನಟ ದರ್ಶನ್!

ಆಗಸ್ಟ್ 6, 2025 - 18:02
 0  10
Darshan: ಜಾಮೀನು ರದ್ದು ಭೀತಿ: ಚಾಮುಂಡಿ ತಾಯಿಯ ಮೊರೆ ಹೋದ ನಟ ದರ್ಶನ್!

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ತೂಗುದೀಪ ಮತ್ತು ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲವು ಆರೋಪಿಗಳ ಜಾಮೀನು ರದ್ದಾಗುವ ಭೀತಿ ಎದುರಾಗಿದೆ. ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ.

ಇದರ ನಡುವೆ ಚಾಮುಂಡಿ ಬೆಟ್ಟಕ್ಕೆ ನಟ ದರ್ಶನ್ ಭೇಟಿ ಕೊಟ್ಟಿದ್ದಾರೆ. ಚಾಮುಂಡೇಶ್ವರಿಗೆ ಪೂಜೆ ಸಲ್ಲಿಕೆ ಮಾಡಿದ್ದಾರೆ.  ವಿದೇಶಕ್ಕೆ ಹೋಗಿ ಬಂದ ನಂತರ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ ದರ್ಶನ್. ಒಳಿತಾಗಲಿ ಎಂದು ಚಾಮುಂಡಿ ತಾಯಿಯ ಮೊರೆ ಹೋಗಿದ್ದಾರೆ.  ದರ್ಶನ್ ನೋಡಲು  ಅಭಿಮಾನಿಗಳು ಮುಗಿಬಿದ್ದಿದ್ದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರುಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಚಾಲ್ತಿಯಲ್ಲಿದೆ. ಸರ್ಕಾರವು ಸಹ ಲಿಖಿತ ಕಾರಣಗಳನ್ನು ಸುಪ್ರೀಂಕೋರ್ಟ್​​​ಗೆ ನೀಡಿದ್ದು, ದರ್ಶನ್ ಹಾಗೂ ಪವಿತ್ರಾ ಅವರುಗಳು ರೇಣುಕಾ ಸ್ವಾಮಿಯ ಅಪಹರಣ ಮತ್ತು ಕೊಲೆಯಲ್ಲಿ ಸಕ್ರಿಯರಾಗಿ ಭಾಗಿ ಆಗಿದ್ದರು ಎಂದು ಆರೋಪಿಸಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow