Darshan: ದರ್ಶನ್ ಬಳ್ಳಾರಿ ಜೈಲ್‌ ಭವಿಷ್ಯ ಸೆ.9ಕ್ಕೆ ಮುಂದೂಡಿಕೆ..!

ಸೆಪ್ಟೆಂಬರ್ 3, 2025 - 18:19
 0  12
Darshan: ದರ್ಶನ್ ಬಳ್ಳಾರಿ ಜೈಲ್‌ ಭವಿಷ್ಯ ಸೆ.9ಕ್ಕೆ ಮುಂದೂಡಿಕೆ..!

ರೇಣುಕಾಸ್ವಾಮಿ ಕೇಸ್​ನಲ್ಲಿ ದರ್ಶನ್​ ಮತ್ತೆ ಪರಪ್ಪನ ಅಗ್ರಹಾರ ಸೇರಿದ್ದಾರೆ. ಆದ್ರೆ ದರ್ಶನ್​ನನ್ನ ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲು ಜೈಲು ಅಧಿಕಾರಿಗಳು ಮುಂದಾಗಿದ್ದಾರೆ. ಹೈಕೋರ್ಟ್‌ನಿಂದ ಜಾಮೀನು ಪಡೆಯುವ ಮುನ್ನ ದರ್ಶನ್‌ ಬಳ್ಳಾರಿ ಜೈಲಿನಲ್ಲಿದ್ದರು. ಆದರೆ, ಸುಪ್ರೀಂ ಕೋರ್ಟ್‌ ಜಾಮೀನು ರದ್ದು ಮಾಡಿದ ಬಳಿಕ ಆತನನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡಲಾಗಿದೆ.

ಆದರೆ, ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಬೇಕು ಎಂದು ಜೈಲಿನ ಅಧಿಕಾರಿಗಳು ಸಲ್ಲಿಕೆ ಮಾಡಿದ್ದ ಅರ್ಜಿಯನ್ನು 64ನೇ ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗಿದೆ. ಬುಧವಾರ ದರ್ಶನ್‌ ಪರ ವಕೀಲ ಸುನೀಲ್‌ ಕುಮಾರ್‌ ತಮ್ಮ ವಾದ ಮಂಡಿಸಿದ ಬಳಿಕ, ಸೆಷನ್ಸ್‌ ಕೋರ್ಟ್‌ ಸೆ.9ಕ್ಕೆ ತೀರ್ಪು ಕಾಯ್ದಿರಿಸಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಇನ್ನೇನು ವಿಚಾರಣೆ ಆರಂಭವಾಗಿದೆ.

ಹಾಗಾಗಿ ದರ್ಶನ್‌ರನ್ನು ಯಾವುದೇ ಕಾರಣಕ್ಕೂ ಬೇರೆ ಜೈಲಿಗೆ ಶಿಫ್ಟ್‌ ಮಾಡಬಾರದು ಎಂದು ದರ್ಶನ್‌ ಪರ ವಕೀಲ ಸುನೀಲ್‌ ಕುಮಾರ್‌ ವಾದ ಮಂಡಿಸಿದ್ದಾರೆ. ಇನ್ನೂ ಸರ್ಕಾರದ ಪರ ವಕೀಲ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಎರಡೂ ಪಕ್ಷಗಳ ವಾದ-ಪ್ರತಿವಾದ ಆಲಿಸಿದ ಕೋರ್ಟ್‌ ಸೆ.9ಕ್ಕೆ ಆದೇಶವನ್ನು ಕಾಯ್ದಿರಿಸಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow