Darshan: ದರ್ಶನ್ ಮನವಿಗೆ ಅಸ್ತು ಎಂದ ಕೋರ್ಟ್! ಇನ್ನಾದರೂ ಸಿಗುತ್ತಾ ಹಾಸಿಗೆ, ದಿಂಬು?

ಅಕ್ಟೋಬರ್ 10, 2025 - 18:11
 0  14
Darshan: ದರ್ಶನ್ ಮನವಿಗೆ ಅಸ್ತು ಎಂದ ಕೋರ್ಟ್! ಇನ್ನಾದರೂ ಸಿಗುತ್ತಾ ಹಾಸಿಗೆ, ದಿಂಬು?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಜೈಲು ಸೇರಿರೋ ನಟ ದರ್ಶನ್, ಜೈಲಲ್ಲಿ ಯಾವುದೇ ಸೌಕರ್ಯ ನೀಡುತ್ತಿಲ್ಲ. ನ್ಯಾಯಾಧೀಶರೇ ಖುದ್ದು ಪರಿಶೀಲಿಸಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಅಂಗೀಕರಿಸಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ. 

ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬೆಂಗಳೂರಿನ ಪರಪ್ಪನ ಅಗ್ರಹಾರ  ಜೈಲಿಗೆ ಭೇಟಿ ನೀಡಿ ಸವಲತ್ತು ಪರಿಶೀಲಿಸಬೇಕು.  ಕೋರ್ಟ್ ಆದೇಶ ಪಾಲನೆಯಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬೇಕು . ಜೈಲು ಕೈಪಿಡಿಯಂತೆ ಸವಲತ್ತು ನೀಡಲಾಗಿದೆಯೇ ಎಂದು ಪರಿಶೀಲನೆ ನಡೆಸುವಂತೆ 57ನೇ ಸಿಸಿಎಚ್ ಕೋರ್ಟ್ ಆದೇಶ ನೀಡಿದೆ.  ಅಕ್ಟೋಬರ್‌ 18 ರೊಳಗೆ ಭೇಟಿ ನೀಡಿ ವರದಿ ನೀಡಲು ಸೂಚನೆ ನೀಡಲಾಗಿದೆ.  ಬೆಂಗಳೂರು ನಗರ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗೆ ಕೋರ್ಟ್ ಈ  ಸೂಚನೆ ನೀಡಿದೆ. ಇದರಿಂದಾಗಿ ಕೋರ್ಟ್ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದಂತೆ ಆಗಿದೆ. 

ಕೋರ್ಟ್ ಆದೇಶದಂತೆ ಸೌಲಭ್ಯ ನೀಡಲಾಗಿದೆ ಎಂದು ಜೈಲು ಅಧಿಕಾರಿಗಳು ಹೇಳಿದ್ರು. ಆದ್ರೆ, ಜೈಲಿನಲ್ಲಿ ಕನಿಷ್ಠ ಸೌಲಭ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು ಆರೋಪ ಮಾಡಿದ್ರು.  ದರ್ಶನ್ ಗೆ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ನ್ಯಾಯಾಧೀಶರೇ ಪರಿಶೀಲಿಸಲು ನಟ ದರ್ಶನ್ ಕೋರ್ಟ್ ಗೆ ಮನವಿ ಮಾಡಿದ್ದರು. ಸಿ.ಆರ್‌.ಪಿ.ಸಿ. ಸೆಕ್ಷನ್ 310 ರಡಿ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ಬಗ್ಗೆ ಈಗ ಕೋರ್ಟ್ ಮಹತ್ವದ ಆದೇಶ ನೀಡಿದೆ. 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow