DCM ಸ್ವಕ್ಷೇತ್ರದಲ್ಲಿ ನೈತಿಕ ಪೊಲೀಸ್ ಗಿರಿ: ಅನ್ಯ ಧರ್ಮದ ಯುವಕ, ಯುವತಿ ಮೇಲೆ ಹಲ್ಲೆ

ಸೆಪ್ಟೆಂಬರ್ 21, 2025 - 14:12
 0  21
DCM ಸ್ವಕ್ಷೇತ್ರದಲ್ಲಿ ನೈತಿಕ ಪೊಲೀಸ್ ಗಿರಿ: ಅನ್ಯ ಧರ್ಮದ ಯುವಕ, ಯುವತಿ ಮೇಲೆ ಹಲ್ಲೆ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರದಲ್ಲಿ ನೈತಿಕ ಪೊಲೀಸ್ ಗಿರಿಯ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕನಕಪುರ ಠಾಣೆ ಪೊಲೀಸರು ಒಬ್ಬ ಮಹಿಳೆಯನ್ನು ಸೇರಿ ಒಟ್ಟು ಐವರನ್ನು ಬಂಧಿಸಿದ್ದಾರೆ. ಬಂಧಿತರಾದವರು ನವಾಜ್, ಕಬೀರ್, ಸುಯೋಲ್, ನಯಾಜ್ ಮತ್ತು ಮಹಿಳೆ. ಪ್ರಕರಣದ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ ಇಂದಿರಾನಗರದಲ್ಲಿ ನಡೆದಿದೆ. ಅಕ್ರಮ ಸಂಬಂಧ ಶಂಕೆಯ ಹಿನ್ನೆಲೆಯಲ್ಲಿ ಹಿಂದೂ ಯುವಕ ಮಹೇಶ್ ಹಾಗೂ ಮುಸ್ಲಿಂ ಮಹಿಳೆ ಹಸೀನಾ ಬಾನು ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಇದಷ್ಟೇ ಅಲ್ಲದೆ, ಇಬ್ಬರಿಗೂ ಬಲವಂತವಾಗಿ ತಲೆ ಬೋಳಿಸುವ ಮೂಲಕ ಅವಮಾನ ಮಾಡಿದ್ದಾರೆ. ಈ ಕೃತ್ಯವನ್ನು ಮಹಿಳೆಯ ಕುಟುಂಬಸ್ಥರು ಹಾಗೂ ಸಂಬಂಧಿಕರು ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಹಲ್ಲೆಗೆ ಒಳಗಾದವರನ್ನು ತಕ್ಷಣ ರಕ್ಷಿಸಿ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಮಹೇಶ್ ಮತ್ತು ಹಸೀನಾ ಬಾನು ಅವರ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow