Deepavali 2025: ದೀಪಾವಳಿ ಹಬ್ಬದ ಮಹತ್ವ ಏನು; ಆಚರಣೆ ಹಿಂದಿನ ಉದ್ದೇಶ ಏನು?
ಕತ್ತಲೆಯನ್ನು ಹೋಗಲಾಡಿಸಿ ಮನೆ ಮತ್ತು ಮನದ ಕತ್ತಲೆಯನ್ನೂ ನಿವಾರಿಸಿ ಬೆಳಕಿನ ಆಶೆಯನ್ನು ಉಂಟುಮಾಡುವ ಹಬ್ಬವೇ ದೀಪಾವಳಿ. ಮುಂಗಾರು ಬೆಳೆ ಕೊಯ್ಲಿನ ಕಾಲಕ್ಕೆ ಬರುವ ಈ ಹಬ್ಬವು ಸಂತೋಷ, ಸೌಹಾರ್ದ ಮತ್ತು ಹೊಸತನದ ಸಂಕೇತವಾಗಿದೆ.
ಹಿಂದೂ ಧಾರ್ಮಿಕ ಕ್ಯಾಲೆಂಡರ್ ಪ್ರಕಾರ ಕಾರ್ತಿಕ ಮಾಸದಲ್ಲಿ ಆಚರಿಸಲಾಗುವ ಈ ಹಬ್ಬವನ್ನು ಕೆಲ ಕಡೆ ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲ ದಿನ ಆಚರಿಸಲಾಗುತ್ತದೆ. ಇನ್ನು ಕೆಲ ಕಡೆಗಳಲ್ಲಿ ಐದು ದಿನಗಳ ಕಾಲ ವಿಜೃಂಭಣೆಯಿಂದ ದೀಪಾವಳಿಯನ್ನು ಸಂಭ್ರಮಿಸುತ್ತಾರೆ.
ಹಬ್ಬ ಸಮೀಪಿಸುತ್ತಿದ್ದಂತೆ ಅನೇಕರು ತಮ್ಮ ಮನೆಗಳನ್ನು ಶುದ್ಧಗೊಳಿಸಿ ಅಲಂಕರಿಸುತ್ತಾರೆ, ಹೊಸ ವಸ್ತುಗಳನ್ನು ಖರೀದಿಸುತ್ತಾರೆ. ಹೊಸ ಬೆಳಕಿನ ಆಶಯದೊಂದಿಗೆ ಮನೆಗಳ ಮುಂದೆ ದೀಪಗಳನ್ನು ಬೆಳಗಿಸುವ ಸಂಪ್ರದಾಯವೂ ಈ ಹಬ್ಬದ ಅಸ್ತಿತ್ವವನ್ನು ಪ್ರತಿಬಿಂಬಿಸುತ್ತದೆ.
ದೀಪಾವಳಿ ಹಬ್ಬದ ಮಹತ್ವ:
ದೀಪಾವಳಿ ‘ದೀಪಾ’ ಎಂದರೆ ಮಣ್ಣಿನ ದೀಪ ಹಾಗೂ ‘ವಲಿ’ ಎಂದು ಯಾವುದಾದರು ವಸ್ತು ಸರಣಿಯಾಗಿಯಿಡುವುದು. ದೀಪಾವಳಿಯ ಅಮವಾಸ್ಯೆಯನ್ನು ದೀವಾಳಿ ಅಮಾವಾಸ್ಯೆಯೆಂದು ಕರೆಯುತ್ತಾರೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಆ ದಿನ ಕತ್ತಲೆಯಿಂದ ಕೂಡಿರುತ್ತದೆ. ದೀಪಾವಳಿ ಹಬ್ಬವನ್ನು ಹಿಂದೂಗಳ ಹಬ್ಬ ಮಾತ್ರ ಆಗಿರದೇ ಈ ಹಬ್ಬವನ್ನು ಜೈನ್, ಸಿಖ್‍ಗಳು ಹಾಗೂ ಬೌದ್ಧರು ಕೂಡ ಈ ಹಬ್ಬವನ್ನು ಆಚರಿಸುತ್ತಾರೆ.
ಭಾರತದ ಬೇರೆ ಬೇರೆ ಪ್ರದೇಶಗಳಲ್ಲಿ ದೀಪಾವಳಿಗೆ ಅದರದ್ದೇ ಆದ ಮಹತ್ವವಿದೆ ಹಾಗೂ ಅವರದ್ದೆ ಆದ ಕೆಲವು ಸಂಪ್ರದಾಯಗಳು ಇರುತ್ತದೆ. ಕೆಲವರು ತಮ್ಮ ಸಂಪ್ರದಾಯಕ್ಕೆ ತಕ್ಕಂತೆ ತಮ್ಮ ಹಬ್ಬವನ್ನು ಆಚರಿಸುತ್ತಾರೆ. ಆದರೆ ಎಲ್ಲರ ಪ್ರಕಾರ ದೀಪಾವಳಿ ಹಬ್ಬ ರಾಮಾಯಣದ ಕಥೆಗೆ ಹೊಂದಿಕೊಂಡಿದೆ.
ರಾವಣನನ್ನು ಸಂಹಾರ ಮಾಡಿ ರಾಮ, ಸೀತಾ, ಲಕ್ಷ್ಮಣ ಹಾಗೂ ಹನುಮಂತ ಲಂಕೆಯಿಂದ ಆಯೋಧ್ಯೆಗೆ ಹಿಂದಿರುಗಿದ ದಿನ. ಅಲ್ಲದೇ ರಾಮ ಪಟ್ಟಾಭಿಷೇಕಗೊಂಡ ದಿನ. ಹಾಗಾಗಿ ಜನರು ಆ ದಿನ ಆನಂದದಿಂದ ದೀಪಗಳನ್ನು ಬೆಳಗಿಸಿ ರಾಮನನ್ನು ಸ್ವಾಗತಿಸಿದ್ದರು. ಅಲ್ಲದೇ ಪಾಂಡವರು ಕೂಡ ಅದೇ ದಿನ ತಮ್ಮ ಅಜ್ಞಾತವಾಸವನ್ನು ಮುಗಿಸಿದ ದಿನ ಎನ್ನುವ ಕಥೆಯು ಇದೆ.
ದೀಪಾವಳಿಯ ಐದು ಹಬ್ಬಗಳು ಹಾಗೂ ಅದರ ಮಹತ್ವಗಳು;
1. ದನ್ತೇರಸ್: ದನ್ತೇರಸ್ ಹಬ್ಬವನ್ನು ನವೆಂಬರ್ 5ರಂದು ಆಚರಿಸುತ್ತಾರೆ. ಈ ದಿನ ಜನರು ತಮ್ಮ ಮನೆಗೆ ಅಡುಗೆ ಪಾತ್ರೆಗಳು, ಚಿನ್ನದ ನಾಣ್ಯ ಹಾಗೂ ಆಭರಣಗಳನ್ನು ಖರೀದಿಸಲು ಹೋಗುತ್ತಾರೆ. ಅಲ್ಲದೇ ತಮ್ಮ ಮನೆ ಹಾಗೂ ಕಚೇರಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಮಣ್ಣಿನ ದೀಪವನ್ನು ಹಚ್ಚಿ ಅಲಂಕರಿಸುತ್ತಾರೆ.
2. ನರಕ ಚತುರ್ದಶಿ: ನರಕ ಚತುರ್ದಶಿಯನ್ನು ಚೋಟಾ ದೀಪಾವಳಿ ಎಂದು ಕರೆಯುತ್ತಾರೆ. ಶ್ರೀಕೃಷ್ಣನು ನರಕಾಸುರನನ್ನು ಕೊಂದ ನೆನಪನ್ನು ಈ ಹಬ್ಬ ತರುತ್ತದೆ. ನರಕಾಸುರನನ್ನು ಆಶ್ವಯುಜ ಕೃಷ್ಣ ಚತುರ್ದಶಿಯ ಕತ್ತಲೆಯಲ್ಲಿ ಕೃಷ್ಣ ಸಂಹಾರ ಮಾಡುತ್ತಾನೆ. ಈ ಹಬ್ಬದಂದು ಸಿಹಿ ತಿನುಸುಗಳನ್ನು ಖರೀದಿಸಿ ಕುಟುಂಬದವರಿಗೆ, ಸ್ನೇಹಿತರಿಗೆ ಹಾಗೂ ಸಂಬಂಧಿಕರಿಗೆ ಹಂಚುತ್ತಾರೆ. ಸಿಹಿ ತಯಾರಿಸುವವರು ನರಕ ಚತುರ್ದಶಿದಂದು ಹೆಚ್ಚು ಸಮಯ ಕೆಲಸ ಮಾಡುತ್ತಾರೆ.
3. ದೀಪಾವಳಿ: ದೀಪಾವಳಿಯಂದು ಲಕ್ಷ್ಮಿ ಪೂಜೆ ಮಾಡುತ್ತಾರೆ. ಲಕ್ಷ್ಮೀ ಎಂದರೆ ಕೇವಲ ಧನಾಧಿದೇವತೆ ಎಂಬ ಪ್ರತೀತಿಯಿದೆ. ಲಕ್ಷ್ಮೀ ಕೇವಲ ಧನಲಕ್ಷ್ಮೀ ಮಾತ್ರವಲ್ಲ. ಸಕಲ ಶ್ರೇಯಸ್ಸುಗಳಿಗೆ ಲಕ್ಷ್ಮೀ ಕಾರಣ ಎಂದು ಹೇಳುತ್ತಾರೆ. ಈ ಹಬ್ಬದಂದು ಎಲ್ಲರೂ ತಮ್ಮ ಕುಟುಂಬದವರೊಂದಿಗೆ ಸೇರಿ ಒಬ್ಬರಿಗೊಬ್ಬರು ಸಿಹಿ ಹಂಚಿ ಉಡುಗೊರೆ ನೀಡುತ್ತಾರೆ.
4. ಗೋಪೂಜೆ: ದೀಪಾವಳಿಯ ನಾಲ್ಕನೇ ದಿನ ಗೋ ಪೂಜೆ ಮಾಡುತ್ತಾರೆ. ಈ ದಿನದಂದು ಗೋವುಗಳನ್ನು ಅಲಂಕರಿಸಿ, ಹಾಲು ಹಿಡಿಯುವ ಪಾತ್ರೆ, ಕುಡಗೋಲುಗಳನ್ನು ಪೂಜಿಸಿ, ಗೋಶಾಲೆಯನ್ನು ದೀಪದಿಂದ ಬೆಳಗಿ, ಹಸುಗಳಿಗೆ ಅಕ್ಕಿ, ಬೆಲ್ಲ, ತಿಂಡಿ ತಿನಿಸುಗಳನ್ನು ನೀಡುತ್ತಾರೆ. ಉತ್ತರ ಭಾರತದಲ್ಲಿ ಅಥವಾ ಕೆಲವರ ಸಂಪ್ರದಾಯದಲ್ಲಿ ಈ ದಿನದಂದು ಪತಿ ತಮ್ಮ ಪತ್ನಿಯರಿಗೆ ಉಡುಗೊರೆ ನೀಡುತ್ತಾರೆ. ಅಲ್ಲದೇ ಹೊಸದಾಗಿ ಮದುವೆಯಾದ ಜೋಡಿಯನ್ನು ಮನೆಗೆ ಔತಣಕ್ಕೆ ಕರೆದು ಉಡುಗೊರೆ ನೀಡಲಾಗುತ್ತದೆ.
5. ಬಾಯ್ ದೂಜ್: ಬಾಯ್ ದೂಜ್ ಅನ್ನು ಬಯ್ಯಾ ದೂಜ್ ಎಂದು ಕರೆಯುತ್ತಾರೆ. ದೀಪಾವಳಿಯ ಐದನೇ ದಿನದಂದು ಈ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬ ಅಣ್ಣ-ತಂಗಿಯರ ಹಬ್ಬವಾಗಿದ್ದು, ಅಣ್ಣಂದಿರು ತಮ್ಮ ತಂಗಿಯ ಮನೆಗೆ ಊಟಕ್ಕೆ ಹೋಗುತ್ತಾರೆ. ಅಲ್ಲದೇ ತಿಲಕ ಶಾಸ್ತ್ರ ಮಾಡುತ್ತಾರೆ. ಸಹೋದರಿಯರು ತಮ್ಮ ಸಹೋದರನಿಗೆ ತಿಲಕ ಶಾಸ್ತ್ರ ಮಾಡುತ್ತಾರೆ. ಇದನ್ನು ಮತ್ತೊಂದು ರಕ್ಷಾ ಬಂಧನ ಎಂದೂ ಕರೆಯಲಾಗುತ್ತದೆ.
ನಿಮ್ಮ ಪ್ರತಿಕ್ರಿಯೆ ಏನು?