Delhi Election: ದೆಹಲಿ ಕುರುಕ್ಷೇತ್ರಕ್ಕೆ ಮುಹೂರ್ತ ಫಿಕ್ಸ್‌: ಫೆಬ್ರವರಿ 5ಕ್ಕೆ ಮತದಾನ, 8ಕ್ಕೆ ಫಲಿತಾಂಶ

ಜನವರಿ 7, 2025 - 16:07
 0  16
Delhi Election: ದೆಹಲಿ ಕುರುಕ್ಷೇತ್ರಕ್ಕೆ ಮುಹೂರ್ತ ಫಿಕ್ಸ್‌: ಫೆಬ್ರವರಿ 5ಕ್ಕೆ ಮತದಾನ, 8ಕ್ಕೆ ಫಲಿತಾಂಶ

ನವದೆಹಲಿ: ಭಾರತದ ಚುನಾವಣಾ ಆಯೋಗವು ದೆಹಲಿ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಹೊರ ಬರಲಿದೆ.  ದೆಹಲಿಯಲ್ಲಿ ಬಿಜೆಪಿ, ಆಮ್ ಆದ್ಮಿ ಪಾರ್ಟಿ ಹಾಗೂ ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಇದೆ.

 ದೆಹಲಿಯಲ್ಲಿ ಆಡಳಿತಾರೂಢ ಎಎಪಿ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಆರೋಪ ಪ್ರತ್ಯರೋಪಗಳು ಏರ್ಪಟ್ಟಿರುವ ಬೆನ್ನಲೇ ಈಗ ಚುನಾವಣೆ ಘೋಷಣೆಯಾಗಿದ್ದು, ಪಕ್ಷಗಳ ನಡುವಣ ಚುನಾವಣಾ ಕಾವನ್ನು ಮತ್ತಷ್ಟು ಹೆಚ್ಚು ಮಾಡಿದೆ.

ದೆಹಲಿಯಲ್ಲಿ, ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸತತ ಮೂರನೇ ಅವಧಿಗೆ ಸ್ಪರ್ಧಿಸುತ್ತಿದ್ದು, ಭಾರತೀಯ ಜನತಾ ಪಕ್ಷ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಪಕ್ಷವನ್ನು ಸೋಲಿಸುವ ಭರವಸೆಯಲ್ಲಿದೆ. ಕಾಂಗ್ರೆಸ್ ಪಕ್ಷ ಕೂಡ ಕಣದಲ್ಲಿದೆ, ಆದರೆ ಈ ಬಾರಿ ತನ್ನ ಲೋಕಸಭಾ ಚುನಾವಣೆಯ ಮಿತ್ರ ಪಕ್ಷವಾದ ಎಎಪಿ ವಿರುದ್ಧ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ದೆಹಲಿ ಮುಖ್ಯ ಚುನಾವಣಾ ಅಧಿಕಾರಿ ಪ್ರಕಟಿಸಿದ ಮತದಾರರ ಪಟ್ಟಿಯ ಪ್ರಕಾರ 18-19 ವರ್ಷ ವಯಸ್ಸಿನ 2.08 ಲಕ್ಷ ಮೊದಲ ಬಾರಿಗೆ ಮತದಾನ ಮಾಡುವವರು ಸೇರಿದಂತೆ 1.55 ಕೋಟಿಗೂ ಹೆಚ್ಚು ಮತದಾರರು ದೆಹಲಿಯಲ್ಲಿ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow