Devendra Fadnavis: ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ!

ಮಹಾರಾಷ್ಟ್ರ: ಮಹಾರಾಷ್ಟ್ರ ಸಿಎಂ ಆಯ್ಕೆ ಕಗ್ಗಂಟಾಗಿಯೇ ಉಳಿದಿತ್ತು. ಯಾರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಬಗ್ಗೆ ಸಮಯ ಕಳೆದಂತೆ ಕುತೂಹಲ ಹೆಚ್ಚುತ್ತಿತ್ತು. ಈ ಮಧ್ಯೆ ದೇವೇಂದ್ರ ಫಡ್ನವಿಸ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಡಲಾಗಿದೆ. ಅಂತೆಯೇ ಫಡ್ನವಿಸ್ ನಾಳೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ, ಎನ್ಸಿಪಿ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಯಾ ಗಲಿದ್ದಾರೆ. ಫಡ್ನವಿಸ್, ಶಿಂಧೆ, ಪವಾರ್ ಅವರು ನಾಳೆ ಸಂಜೆ ಐದು ಗಂಟೆಗೆ ಮುಂಬೈನಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಪ್ರಮಾಣ ವಚನ ಸಮಾರಂಭದಲ್ಲಿ 40,000 ಬಿಜೆಪಿ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ವಿವಿಧ ಧರ್ಮಗಳ ಮುಖಂಡರು ಸೇರಿದಂತೆ 2,000 ವಿವಿಐಪಿಗಳಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






