Dharmasthala Case: ಚಿನ್ನಯ್ಯನಿಗೆ ಹಣ ಕೊಟ್ಟಿದ್ಯಾರು..? 11 ಮಂದಿಗೆ ನೋಟಿಸ್
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ (Dharmasthala Case) ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಪೊಲೀಸರು ಚುರುಕುಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬುರುಡೆ ಗ್ಯಾಂಗ್‌ಗೆ ಹಣಕಾಸು ನೆರವು ನೀಡಿದ 11 ಮಂದಿಗೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಷಡ್ಯಂತ್ರದ ಹಿಂದಿನ ಅಜ್ಞಾತ ಕೈಗಳನ್ನು ಪತ್ತೆಹಚ್ಚಲು ಎಸ್‌ಐಟಿ ಮುಂದಾಗಿದೆ. ಚಿನ್ನಯ್ಯ ಹಾಗೂ ಪತ್ನಿಯ ಖಾತೆಗೆ ಹಣ ವರ್ಗಾವಣೆ ಮಾಡಿದವರ ವಿವರಗಳನ್ನು ಪಡೆದುಕೊಳ್ಳಲಾಗಿದೆ. ಜೊತೆಗೆ, ಚಿನ್ನಯ್ಯನ ಕುಟುಂಬದ ಪ್ರತಿಯೊಬ್ಬರ ಬ್ಯಾಂಕ್ ಖಾತೆ ವಿವರಗಳನ್ನು ಸಂಗ್ರಹಿಸಲಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarody) ಬೆಂಬಲಿಗರು ಸೇರಿದಂತೆ ಒಟ್ಟು 11 ಮಂದಿಗೆ ನೋಟಿಸ್ ನೀಡಲಾಗಿದ್ದು, ಇವರಲ್ಲಿ 6 ಮಂದಿಯನ್ನು ಈಗಾಗಲೇ ವಿಚಾರಣೆಗೊಳಪಡಿಸಲಾಗಿದೆ. ಗಿರೀಶ್ ಮಟ್ಟಣ್ಣವರ್ ಪತ್ನಿಯ ಖಾತೆಯಿಂದಲೂ ಚಿನ್ನಯ್ಯನಿಗೆ ಹಣ ವರ್ಗಾವಣೆಯಾಗಿದೆ ಎಂಬುದು ತನಿಖೆಯಿಂದ ಬಹಿರಂಗವಾಗಿದೆ.
ಸುಮಾರು 6 ತಿಂಗಳ ಹಿಂದೆ ನಡೆದ ಹಣ ವರ್ಗಾವಣೆಗಳ ಕುರಿತೂ ಪರಿಶೀಲನೆ ನಡೆಯುತ್ತಿದ್ದು, ಇನ್ನಷ್ಟು ಮಂದಿ ಫಂಡಿಂಗ್‌ನಲ್ಲಿ ಶಾಮೀಲಾಗಿರುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಅವರಿಗೆ ಸಹ ನೋಟಿಸ್ ನೀಡುವ ಸಾಧ್ಯತೆ ಇದೆ.
ನಿಮ್ಮ ಪ್ರತಿಕ್ರಿಯೆ ಏನು?