Dharmasthala Case: ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ʼಗೆ ಬಿಗ್ ರಿಲೀಫ್!

ಆಗಸ್ಟ್ 21, 2025 - 17:59
 0  22
Dharmasthala Case: ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ʼಗೆ ಬಿಗ್ ರಿಲೀಫ್!

ಮಂಗಳೂರು: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಿದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಸಮೀರ್ ಎಂಡಿ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಬೆಳ್ತಂಗಡಿ ಪೊಲೀಸರು ಬಂಧಿಸಲು ಸಿದ್ಧತೆ ನಡೆಸುತ್ತಿದ್ದಂತೆಯೇ ಸಮೀರ್ ನಿರೀಕ್ಷಣಾ ಜಾಮೀನುಗಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ ಮಂಗಳೂರು ಜಿಲ್ಲಾ ನ್ಯಾಯಾಲಯ ಅವರು ಸಲ್ಲಿಸಿದ ಅರ್ಜಿಯನ್ನು ಮಂಜೂರು ಮಾಡಿದ್ದು, ಎರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಮೂಲಗಳ ಪ್ರಕಾರ, ಬೆಳಗ್ಗೆ 6 ಗಂಟೆಯಿಂದಲೇ ಬನ್ನೇರುಘಟ್ಟದಲ್ಲಿರುವ ಸಮೀರ್ ಅವರ ಮನೆಯಲ್ಲಿ ಪೊಲೀಸರು ಅರೆಸ್ಟ್ ಮಾಡಲು ತಯಾರಿ ನಡೆಸಿದ್ದರು. ಆದರೆ ಕೋರ್ಟ್ ಆದೇಶದ ಪ್ರತಿಯನ್ನು ಪಡೆಯುವ ಮೊದಲು ಸಮೀರ್ ಮನೆಯಿಂದ ಹೊರಟುಬಿಟ್ಟಿದ್ದರು. ನಂತರ ತುರ್ತಾಗಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಸಮಾಜ ಮಾಧ್ಯಮದಲ್ಲಿ ಧರ್ಮಸ್ಥಳ ವಿರುದ್ಧ ಪ್ರಚಾರ ನಡೆಸಿದ ಆರೋಪದ ಮೇರೆಗೆ ಸಮೀರ್ ವಿರುದ್ಧ ಕೇಸ್ ದಾಖಲಾಗಿದ್ದು, ಈಗ ವಿಚಾರಣೆ ಹಂತದಲ್ಲಿ ಪ್ರಕರಣ ಮುಂದುವರಿಯಲಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow