Donald Trump: ಟ್ರಂಪ್ ಪ್ರಮಾಣವಚನ ಸ್ವೀಕಾರ ಸಮಾರಂಭ..! ಯಾರಿಗೆಲ್ಲಾ ಇದೆ ಆಹ್ವಾನ ಗೊತ್ತಾ..?

ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಪ್ರಮಾಣ ವಚನ ಸಮಾರಂಭಕ್ಕೆ ಭಾರತಕ್ಕೂ ಆಹ್ವಾನ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ವಿದೇಶಿ ಅತಿಥಿಗಳು ಯಾರು?
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಅರ್ಜೆಂಟೀನಾ ಅಧ್ಯಕ್ಷ -ಜೇವಿಯರ್ ಮಿಲಿ, ಹಂಗೇರಿಯನ್ ಪ್ರಧಾನಿ ವಿಕ್ಟರ್ ಓರ್ಬನ್, ಜಪಾನಿನ ವಿದೇಶಾಂಗ ಸಚಿವ ಟಕೇಶಿ ಇವಾಯಾ ಅವರು ಭಾಗವಹಿಸಲಿದ್ದಾರೆ. ಬಲ ಪಂಥೀಯ ನಾಯಕರಾದ ನಿಗೆಲ್ ಫರಾಜ್ (ಯುಕೆ), ಎರಿಕ್ ಜೆಮ್ಮೌರ್ (ಫ್ರಾನ್ಸ್) ಮತ್ತು ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಭಾಗಿಯಾಗಿವ ಸಾಧ್ಯತೆಯಿದೆ.
ಗೈರಾಗಲಿರುವ ಗಣ್ಯರು
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಆಹ್ವಾನವಿಲ್ಲ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕೂಡ ಗೈರುಹಾಜರಾಗಿದ್ದಾರೆ. ಮಾಜಿ ಪ್ರಥಮ ಮಹಿಳೆ ಮಿಚೆಲ್ ಒಬಾಮಾ ಗೈರಾಗಲಿದ್ದಾರೆ.
ಭಾಗವಹಿಸುವ ಉದ್ಯಮಿಗಳು:
ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್‌ನ ಸಿಇಒ ಎಲಾನ್ ಮಸ್ಕ್, ಅಮೆಜಾನ್ ಕಾರ್ಯನಿರ್ವಾಹಕ ಅಧ್ಯಕ್ಷ ಜೆಫ್ ಬೆಜೋಸ್, ಗೂಗಲ್ ಸಿಇಒ ಸುಂದರ್ ಪಿಚೈ, ಆಪಲ್ ಸಿಇಒ ಟಿಮ್ ಕುಕ್, ಓಪನ್‌ಎಐ ಸಿಇಒ ಸ್ಯಾಮ್ ಆಲ್ಟ್‌ಮನ್, ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್, ಟಿಕ್ ಟಾಕ್ ಸಿಇಒ ಶೌ ಜಿ ಚೆವ್ ಭಾಗಿಯಾಗಲಿದ್ದಾರೆ.
ಪ್ರಮಾಣವಚನ ಬಳಿಕ ಟ್ರಂಪ್ ಮೊದಲ ಭಾಷಣ
ಕ್ಯಾಪಿಟಲ್ ಕಟ್ಟಡದ ಮುಂಭಾಗದಲ್ಲಿ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಪ್ರಮಾಣ ವಚನ ಸಮಾರಂಭವು ಯುಎಸ್ ಕ್ಯಾಪಿಟಲ್ ಕಟ್ಟಡದ ಮುಂಭಾಗದಲ್ಲಿ ನಡೆಯಲಿದೆ. ಅಮೆರಿಕದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಮಾಣ ವಚನ ಬೋಧಿಸಲಿದ್ದಾರೆ. ಪ್ರಮಾಣ ವಚನದ ನಂತರ ಟ್ರಂಪ್ ಅಮೆರಿಕದ ಸಾರ್ವಜನಿಕರನ್ನು ಉದ್ದೇಶಿಸಿ ಮೊದಲ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಕೂಡ ಭಾಗವಹಿಸಿ ಅಧಿಕಾರ ಹಸ್ತಾಂತರಕ್ಕೆ ಸಾಕ್ಷಿಯಾಗಲಿದ್ದಾರೆ. 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಸೋಲನ್ನು ಎದುರಿಸಬೇಕಾಯಿತು. ನಂತರ ಡೊನಾಲ್ಡ್ ಟ್ರಂಪ್ ಬೈಡನ್ ಪ್ರಮಾಣ ವಚನದಲ್ಲಿ ಸಮಾರಂಭದಲ್ಲಿ ಭಾಗವಹಿಸಲಿಲ್ಲ.
ನಿಮ್ಮ ಪ್ರತಿಕ್ರಿಯೆ ಏನು?






