Dr. Manmohan Singh: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇನಿಲ್ಲ.!

ಡಿಸೆಂಬರ್ 26, 2024 - 22:42
 0  10
Dr.  Manmohan Singh: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇನಿಲ್ಲ.!

ನವದೆಹಲಿ:- ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಅವರು ನಿಧನ ಹೊಂದಿದ್ದಾರೆ..

ಅನಾರೋಗ್ಯದ ಹಿನ್ನೆಲೆ ಮನಮೋಹನ್‌ ಸಿಂಗ್‌ ಅವರನ್ನು ಇಂದು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್‌ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow