ED Raid: ಗೃಹ ಸಚಿವ ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಕಾಲೇಜಿನ ಮೇಲೆ ಇಡಿ ದಾಳಿ!
ತುಮಕೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿ ಬೆಳ್ಳಂಬೆಳ್ಳಗೆ ಶಾಕ್ ನೀಡಿದ್ದಾರೆ. ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜಿನ ಮೇಲೆ ಇಡಿ ದಾಳಿ ನಡೆದಿದೆ.
ಅಲ್ಲದೆ, ನೆಲಮಂಗಲದ ಟಿ.ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ರೇಡ್ ಮಾಡಲಾಗಿದೆ. ಸದ್ಯ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಎಸ್ಎಸ್ಐಟಿ ಕಾಲೇಜಿನ ಮೇಲೆ ಇಡಿ ದಾಳಿ ನಡೆದಿದೆ.
ಮೂರು ಕಾರುಗಳಲ್ಲಿ ಬಂದ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಎಸ್ಎಸ್ಐಟಿ ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ, ಮಾಧ್ಯಮ ಪ್ರತಿನಿಧಿಗಳು ಕಾಲೇಜು ಆವರಣದ ಒಳಗೆ ಬಾರದಂತೆ ಡಿವೈಎಸ್ಪಿ ತಾಕೀತು ಮಾಡಿದ್ದಾರೆ. ಅಲ್ಲದೆ, ಡಿವೈಎಸ್ಪಿ ನೇತೃತ್ವದಲ್ಲಿ ಕಾಲೇಜಿಗೆ ಭದ್ರತೆ ಒದಗಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?