ED Raid: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ರೇಡ್..!

ಆಗಸ್ಟ್ 13, 2025 - 11:04
 0  9
ED Raid: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ರೇಡ್..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ನಿವಾಸದ ಮೇಲೆ ಬುಧವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. 6 ಕಾರುಗಳಲ್ಲಿ ಬಂದ 24ಕ್ಕೂ ಹೆಚ್ಚು ಅಧಿಕಾರಿಗಳು ಸೈಲ್ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಕಾರಣ ಶಾಸಕ ಸೈಲ್ ಬೆಂಗಳೂರಿನಲ್ಲಿ ಇದ್ದಾರೆ.

ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಸೈಲ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ತಂಡ ದೂರು ದಾಖಲಿಸಿತ್ತು.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬೇಲೆಕೇರಿ ಬಂದರಿನಿಂದ ವಿದೇಶಗಳಿಗೆ ಅಕ್ರಮ ಅದಿರು ಸಾಗಾಟ ಮಾಡಿದ ಪ್ರಕರಣದಲ್ಲಿ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಈ ಪ್ರಕರಣ ಸೇರಿದಂತೆ 6 ಪ್ರಕರಣಗಳಲ್ಲಿ 7 ವರ್ಷಗಳ ಜೈಲು ಶಿಕ್ಷೆ ಮತ್ತು ₹44 ಕೋಟಿಗೂ ಹೆಚ್ಚು ದಂಡ ವಿಧಿಸಲಾಗಿತ್ತು. ಶಿಕ್ಷೆಯ ನಂತರ ಜೈಲು ಸೇರಿದ ಸೈಲ್, ಹೈಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow