Fengal Cyclone: ತಮಿಳುನಾಡಿನಲ್ಲಿ ಮಳೆ ಅಬ್ಬರ: ಶಾಲೆಗಳಿಗೆ ರಜೆ ಘೋಷಣೆ - 13 ವಿಮಾನಗಳ ಹಾರಾಟ ರದ್ದು

ನವೆಂಬರ್ 30, 2024 - 12:00
 0  11
Fengal Cyclone: ತಮಿಳುನಾಡಿನಲ್ಲಿ ಮಳೆ ಅಬ್ಬರ: ಶಾಲೆಗಳಿಗೆ ರಜೆ ಘೋಷಣೆ - 13 ವಿಮಾನಗಳ ಹಾರಾಟ ರದ್ದು

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾದ ಫೆಂಗಲ್‌ ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಅದಲ್ಲದೆ ಫೆಂಗಲ್ ನೆರಳು ವಿಮಾನ ಹಾರಾಟದ ಮೇಲೂ ಬಿದ್ದಿದೆ. ಮಂಗಳೂರು, ತಿರುಚ್ಚಿ, ಕೊಯಮತ್ತೂರು, ಭುವನೇಶ್ವರ್, ಹೈದರಾಬಾದ್ ಮತ್ತು ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಂದ ಚೆನ್ನೈಗೆ ಸಂಪರ್ಕ ಕಲ್ಪಿಸುವ 13 ವಿಮಾನ ಹಾರಾಟ ರದ್ದುಗೊಳಿಸಲಾಗಿದೆ.

ಚಂಡಮಾರುತದ ಪ್ರಭಾವಕ್ಕೆ ಮುಂದಿನ ನಾಲ್ಕೈದು ದಿನ ತಮಿಳುನಾಡು, ಆಂಧ್ರ, ಓಡಿಶಾ, ಕರ್ನಾಟಕದ ವಿವಿಧೆಡೆ ಮಳೆ ಆಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಲಿದೆ. ಕರಾವಳಿ ರಾಜ್ಯದ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದ್ದು, ಜನ ಜೀವನ ಅಸ್ತವ್ಯಸ್ತವಾಗಲಿದೆ ಎಂಬ ಭಯ ಸ್ಥಳೀಯರನ್ನ ಕಾಡುತ್ತಿದೆ.

ಸಮುದ್ರ ತೀರ ಪ್ರದೇಶ, ಮರಿನಾ ಮತ್ತು ಮಮ್ಮಲಪುರಮ್​ ಬೀಚ್​ಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರಕಾರಿಸಲಾಗಿದ್ದು, ಬ್ಯಾರಿಕೇಡ್​​ಗಳನ್ನು ಹಾಕಲಾಗಿದೆ. ರಾಜ್ಯದಲ್ಲಿ ವಿದ್ಯುತ್​ ಮತ್ತು ವ್ಯವಸ್ಥೆಯಲ್ಲಿಯೂ ಯಾವುದೇ ವ್ಯತ್ಯಯವಾಗಿಲ್ಲ. ಮಳೆಯಿಂದಾಗಿ ಈಗಾಗಲೇ ಶಾಲಾ- ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದ್ದು, ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ. ಸಮುದ್ರದ ಪ್ರಕ್ಷುಬ್ಧತೆ ಮತ್ತು ಉಬ್ಬರವಿಳಿತದಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಹವಾಮಾನ ಇಲಾಖೆ ತಿಳಿಸಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow