Fruad Case: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಹೇಳಿದ್ದೇನು ಗೊತ್ತಾ?

ಉದ್ಯೋಗಿಗಳಿಗೆ ವಂಚನೆ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ.
ಆರೋಪ ಹೊತ್ತ ಕಂಪನಿಗೆ ಕೆಲ ವರ್ಷಗಳ ಹಿಂದೆಯೇ ನಾನು ರಾಜೀನಾಮೆ ನೀಡಿದ್ದೇನೆ. ಈ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ತಿಳಿಸಿದ್ದಾರೆ.
2018-19 ರರ ಸ್ಟ್ರಾಬೆರಿ ಲೆನ್ಸೆರಿಯಾ ಪ್ರೈವೇಟ್ ಲಿಮಿಟೆಡ್, ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್, ಬೆರ್ರೀಸ್ ಫ್ಯಾಶನ್ ಹೌಸ್ ಕಂಪನಿಗಳಿಗೆ ಸಾಲದ ರೂಪದಲ್ಲಿ ಹಣ ಹೂಡಿಕೆ ಮಾಡಿದ್ದೆ. ಇದೇ ಕಾರಣಕ್ಕೆ ಆ ಕಂಪನಿಗಳು ನನ್ನನ್ನು ನಿರ್ದೇಶಕನಾಗಿ ನೇಮಕಗೊಳಿಸಿದ್ದವು. ಆದಾಗ್ಯೂ ಸಹ ನಾನು ಆ ಕಂಪನಿಗಳಲ್ಲಿ ಯಾವುದೇ ಸಕ್ರಿಯ ಕಾರ್ಯನಿರ್ವಾಹಕ ಪಾತ್ರವನ್ನು ಹೊಂದಿರಲಿಲ್ಲ ಎಂದು ರಾಬಿನ್ ಉತ್ತಪ್ಪ ತಿಳಿಸಿದ್ದಾರೆ.
ವೃತ್ತಿಪರ ಕ್ರಿಕೆಟಿಗನಾಗಿ, ನಿರೂಪಕನಾಗಿ, ವೀಕ್ಷಕ ವಿವರಣೆಗಾರನಾಗಿ ನನಗೆ ಆ ಕಂಪನಿಗಳ ಕಾರ್ಯಾಚರಣೆಗಳಲ್ಲಿ ಭಾಗವಹಿಸಲು ಸಮಯವಿರಲಿಲ್ಲ. ಅಲ್ಲದೆ ಆ ಕಂಪನಿಗಳ ದೈನಂದಿನ ವ್ಯವಹಾರಗಳಲ್ಲಿ ನಾನು ಭಾಗಿಯಾಗಿರಲಿಲ್ಲ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಸ್ಪಷ್ಟನೆ ನೀಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






