GBA ಚುನಾವಣೆಯಲ್ಲಿ ನಾವು ಕನಿಷ್ಠ 50-60 ಸ್ಥಾನ ಗೆಲ್ಲಬೇಕು: ಹೆಚ್.ಡಿ.ದೇವೇಗೌಡ
ಬೆಂಗಳೂರು: GBA ಚುನಾವಣೆಯಲ್ಲಿ ನಾವು ಕನಿಷ್ಠ 50-60 ಸ್ಥಾನ ಗೆಲ್ಲಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ನಗರದ ಜೆಡಿಎಸ್ ಕಚೇರಿಯ ಜೆಪಿ ಭವನದಲ್ಲಿ ಜಿಬಿಎ ಚುನಾವಣೆ ವಿಚಾರವಾಗಿ ಮಾತನಾಡಿದ್ದು,
ಜಿಬಿಎ ಚುನಾವಣೆಯಲ್ಲಿ ನಾವು ಕನಿಷ್ಠ 50-60 ಸ್ಥಾನ ಗೆಲ್ಲಬೇಕು. ಅದಕ್ಕಾಗಿ ಸಭೆ ನಡೆಸಲು ತೀರ್ಮಾನ ಮಾಡಿದ್ದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ಮಾಡುತ್ತೇವೆ. ಜಿಬಿಎ ಚುನಾವಣೆಯಲ್ಲಿ 50 ಸ್ಥಾನವಾದ್ರೂ ಗೆಲ್ಲುವ ಸಂಕಲ್ಪ ಇದೆ ಎಂದು ಹೇಳಿದ್ದಾರೆ.
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ 4 ತಿಂಗಳಿಂದ ರಾಜ್ಯದಲ್ಲಿ ಪ್ರವಾಸ ಮಾಡುತ್ತಿಲ್ಲ. ಆರೋಗ್ಯ ಸ್ವಲ್ಪ ಸುಧಾರಿಸಿಕೊಳ್ಳಬೇಕಿತ್ತು. ಈಗ ಆರೋಗ್ಯ ಸಂಪೂರ್ಣ ಚೇತರಿಕೆ ಆಗಿದೆ. ವಿದೇಶದಿಂದ ವೈದ್ಯರು ಬಂದು ಆರೋಗ್ಯ ತಪಾಸಣೆ ಮಾಡಿದ್ದಾರೆ.
ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ. ನಿಖಿಲ್ ಕುಮಾರಸ್ವಾಮಿ ಚುರುಕಾಗಿ ಎಲ್ಲೆಡೆ ಓಡಾಡುತ್ತಿದ್ದಾರೆ. ಅನುಭವಿ ರಾಜಕಾರಣಿ ರೀತಿ ನಿಖಿಲ್ ಕೆಲಸ ಮಾಡುತ್ತಿದ್ದಾರೆ. ನನಗೆ ಮಂಡಿನೋವು ಬಿಟ್ಟರೆ ಬೇರೆ ಏನೂ ತೊಂದರೆ ಇಲ್ಲ ಎಂದು ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?