Gold Price: ಆಭರಣ ಪ್ರಿಯರಿಗೆ ಶಾಕ್ ಮೇಲೆ ಶಾಕ್! ಚಿನ್ನದ ದರದಲ್ಲಿ ಭಾರೀ ಏರಿಕೆ - ಇಂದಿನ ರೇಟ್ ಚೆಕ್ ಮಾಡಿ
ಚಿನ್ನಕ್ಕೆ ಭಾರತದಂತಹ ದೇಶದಲ್ಲಿ ಬೇಡಿಕೆ ಇದ್ದೆ ಇರುತ್ತದೆ. ಇಲ್ಲಿ ಚಿನ್ನವನ್ನು ಸಮೃದ್ಧಿ ಹಾಗೂ ಸಂಪತ್ತಿನ ಪ್ರತೀಕವೆಂದೇ ಭಾವಿಸಲಾಗಿದೆ. ಹಾಗಾಗಿ, ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತವೆ. ಇಂದು ಬರೋಬ್ಬರಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 3280 ರೂಪಾಯಿ ಹೆಚ್ಚಳ ಆಗಿದೆ.
ದೇಶೀಯ ಮಾರುಕಟ್ಟೆಯಲ್ಲಿ ಅಕ್ಟೋಬರ್ 14 ಮಂಗಳವಾರದಂದು 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 12,868 ರೂಪಾಯಿಗೆ ತಲುಪಿದೆ. ಇಂದು ಗ್ರಾಂ ಒಂದಕ್ಕೆ ಬೆಲೆ ಬರೋಬ್ಬರಿ 328 ರೂಪಾಯಿ ಹೆಚ್ಚಳ ಆಗಿದೆ. 22 ಕ್ಯಾರೆಟ್ ಬೆಲೆಯಲ್ಲಿ 300 ರೂಪಾಯಿ ಏರಿಕೆ ಆಗಿದ್ದು, 11,795 ರುಪಾಯಿಗೆ ಏರಿಕೆ ಆಗಿದೆ.
24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಇಂದಿನ ಬೆಲೆಯು 3280 ರೂಪಾಯಿ ಹೆಚ್ಚಳ ಆಗಿ, 1,28,680 ರುಪಾಯಿ ಆಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 3000 ರೂ ಏರಿಕೆ ಆಗಿ, 1,17,950 ರೂಪಾಯಿಗೆ ಏರಿಕೆ ಕಂಡಿದೆ. ಬೆಂಗಳೂರಲ್ಲಿ 1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 12,868 ರೂ ಇದೆ. ಬೆಳ್ಳಿ ಬೆಲೆ ಗ್ರಾಂ ಗೆ 8 ರೂಪಾಯಿ 60 ಪೈಸೆ ಹೆಚ್ಚಳ ಆಗಿದ್ದು, 1 ಕೆ ಜಿಯಲ್ಲಿ 8,600 ರೂಪಾಯಿ ಹೆಚ್ಚಳ ಆಗಿ, 1 ಕೆಜಿ ಬೆಲೆಗೆ 1,93,600 ರೂಪಾಯಿಗೆ ಏರಿಕೆ ಆಗಿದೆ.
ನಿಮ್ಮ ಪ್ರತಿಕ್ರಿಯೆ ಏನು?