Gruha Lakshmi Scheme: ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಕುರಿತು ಗುಡ್ ನ್ಯೂಸ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್!

ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆ ಸಾಕಷ್ಟು ಮಹಿಳೆಯರಿಗೆ ಅನುಕೂಲ ಆಗಿದೆ. ಕೆಲವರು ಇದೇ ಹಣದಲ್ಲಿ ಬದುಕು ಕಟ್ಟಿಕೊಳ್ಳುತ್ತಿದ್ದರೆ, ಇನ್ನೂ ಕೆಲವರು ಸಮಾಜಕ್ಕೂ ಅನುಕೂಲ ಮಾಡಿ ಮಾದರಿಯಾಗಿದ್ದಾರೆ.
ಆದ್ರೇ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಮೂರು ಕಂತಿನ ಹಣ ಬಾರದೇ ಸಾಕಷ್ಟು ಮಹಿಳೆಯರು ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆ ಮಾಡಬೇಕು ಅಂತ ಹೇಳಿರೋದ್ರಿಂದ ಸ್ವಲ್ಪ ತಡವಾಗಿದೆ.
ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






