GST ಸ್ಲ್ಯಾಬ್ʼಗಳ ಪರಿಷ್ಕರಣೆ: ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್: ದಿನ ಬಳಕೆ ವಸ್ತುಗಳ ಬೆಲೆ ಇಳಿಕೆ
ಜಿಎಸ್‌ಟಿ ಕೌನ್ಸಿಲ್ನ 56ನೇ ಸಭೆಯು ಪ್ರಾರಂಭವಾಗಿದೆ. ನಿರ್ಮಲಾ ಸೀತಾರಾಮನ್ ನೆತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ. ಇನ್ಮೇಲೆ ಕೇವಲ ಎರಡು ಜಿಎಸ್‌ಟಿ ಸ್ಲ್ಯಾಬ್‌ಗಳು ಮಾತ್ರ ಇರಲಿವೆ. ಶೇಕಡಾ 5 ಮತ್ತು ಶೇ 18 ಸ್ಲ್ಯಾಬ್‌ಗಳು ಮಾತ್ರ ಇರಲಿವೆ. 12 ಪ್ರತಿಶತ ಮತ್ತು 28 ಪ್ರತಿಶತದ ಸ್ಲ್ಯಾಬ್‌ಗಳನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್‌ಟಿ ಜಾರಿಗೆ ಬರಲಿದೆ.
ಹೌದು ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆ ಮೇಲೆ ನಿಂತು ಜಿಎಸ್‌ಟಿ ತೆರಿಗೆ ಇಳಿಕೆ ಘೋಷಿಸಿದ್ದರು. ಇದೀಗ ಈ ಘೋಷಣೆ ಜಾರಿಗೆ ಬರುತ್ತಿದೆ. ದಸರಾಗೆ ಅಂದರೆ ಸೆಪ್ಟೆಂಬರ್ 22ರಂದು ಹೊಸ ಜಿಎಸ್‌ಟಿ ನೀತಿ ಜಾರಿಯಾಗುತ್ತಿದೆ. ಈ ಕುರಿತು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ನೀತಿ ಕುರಿತು ಮಾಹಿತಿ ನೀಡಿದ್ದು, ಇನ್ನು ಮುಂದೆ ಎರಡು ಸ್ಲ್ಯಾಬ್ ಇರಲಿದೆ. ಈ ಮೂಲಕ ಹಲವು ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ತೆರಿಗೆ ಇಳಿಕೆಯಾಗಲಿದೆ. ಕೇವಲ ಶೇಕಡಾ 5 ಹಾಗೂ 18 ಮಾತ್ರ.
ಯಾವೆಲ್ಲ ವಸ್ತುಗಳಿಗೆ ತೆರಿಗೆ ಇಲ್ಲ?
ಯುಎಚ್ಟಿ ಮಿಲ್ಕ್, ಪ್ಯಾಕ್ ಮಾಡಿದ ಚೆನ್ನಾ, ಪನ್ನೀರ್, ಇಂಡಿಯನ್ ಬ್ರೆಡ್ಸ್, ರೋಟಿ, ಕಾಕ್ರಾ, ಚಪಾತಿ, ಪರೋಟ, ಪಿಜ್ಜಾ ಹಾಗೂ ಬ್ರೆಡ್ ಇವಗಳು ಈವರೆಗೆ ಶೇ 5 ರ ಜಿಎಸ್‌ಟಿ ಸ್ಲ್ಯಾಬ್ ಅಡಿ ಬರುತ್ತಿದ್ದವು. ಈ ವಸ್ತುಗಳಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.
ಕಲಿಕಾ ಸಾಮಾಗ್ರಿಗಳಿಗೂ ತೆರಿಗೆ ವಿನಾಯಿತಿ
ಆಹಾರ ವಸ್ತುಗಳು ಮಾತ್ರವಲ್ಲದೆ, ಮಕ್ಕಳ ಕಲಿಕಾಸಾಮಗ್ರಿಗಳ ಮೇವಿನ ಜಿಎಸ್‌ಟಿಯನ್ನೂ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಮ್ಯಾಪ್ಸ್, ಚಾರ್ಟ್ಸ್ ಮತ್ತು ಗ್ಲೋಬ್ಸ್, ಪೆನ್ಸಿಲ್ಸ್, ಶಾರ್ಪರ್ನರ್ಸ್, ಎರೇಸರ್, ಕ್ರಯನ್ಸ್, ಮತ್ತು ಪ್ಯಾಸ್ಟೆಲ್‌ಗಳು, ಎಕ್ಸರ್‌ಸೈಸ್ ಬುಕ್ಸ್ ಮತ್ತು ನೋಟ್ ಪುಸ್ತಕಗಳು ಇವುಗಳ ಮೇಲೆ ಮೊದಲು ಶೇ 12ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಇದನ್ನು ಸಂಪೂರ್ಣ ತೆರವು ಮಾಡಲಾಗಿದ್ದು, ಇನ್ಮುಂದೆ ಶೂನ್ಯ ತೆರಿಗೆ ವ್ಯಾಪ್ತಿಗೆ ಬರಲಿವೆ.
ವೈಯಕ್ತಿಕ, ಆರೋಗ್ಯ ವಿಮೆಗೂ ಇಲ್ಲ ತೆರಿಗೆ
ವೈಯಕ್ತಿಕ ವಿಮೆ ಮತ್ತು ಆರೋಗ್ಯ ವಿಮೆ ಮೇಲಿನ ಶೇ 18ರ ಜಿಎಸ್‌ಟಿಯನ್ನು ಶೂನ್ಯಕ್ಕೆ ಇಳಿಕೆ ಮಾಡಲಾಗಿದೆ. ವೈಯಕ್ತಿಕ ಜೀವವಿಮೆ ಮತ್ತು ಆರೋಗ್ಯ ವಿಮೆಗೆ ಕೇಂದ್ರಸರ್ಕಾರ ಬಹುದೊಡ್ಡ ರಿಯಾಯಿತಿ ನೀಡಿದೆ.
ಯಾವೆಲ್ಲ ವಸ್ತುಗಳ ತೆರಿಗೆ ಇಳಿಕೆ?
ಜಿಎಸ್‌ಟಿ ದರ ಪರಿಷ್ಕರಣೆಯಿಂದ ಯಾವೆಲ್ಲ ವಸ್ತುಗಳ ಬೆಲೆ ಇಳಿಕೆಯಾಗಿದೆ ಎಂಬ ವಿವರವಾದ ಮಾಹಿತಿಗೆ ಈ ಲಿಂಕ್ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಐಷಾರಾಮಿ ವಸ್ತುಗಳ ಮೇಲೆ ಭಾರಿ ತೆರಿಗೆ
ಮಧ್ಯಮ ವರ್ಗ, ಬಡವರನ್ನು ದೃಷ್ಟಿಯಲ್ಲಿಟ್ಟುಕೊಂಡು ಜಿಎಸ್‌ಟಿ ಪರಿಷ್ಕರಣೆ ಮಾಡಿದ್ದೇನೋ ನಿಜ. ಆದರೆ, ಕೆಲ ಐಷಾರಾಮಿ ವಸ್ತುಗಳ ಮೇಲೆ ಭಾರಿ ತೆರಿಗೆ ವಿಧಿಸುವ ಮೂಲಕ ತೆರಿಗೆ ಸಂಗ್ರಹಕ್ಕೂ ಸರ್ಕಾರ ಚಿಂತನೆ ಮಾಡಿದೆ. ಈವರೆಗೆ ಶೇಕಡಾ 28ರಷ್ಟು ತೆರಿಗೆ ವ್ಯಾಪ್ತಿಯಲ್ಲಿ ಬರುತ್ತಿದ್ದ ಐಷಾರಾಮಿ ವಸ್ತುಗಳಿಗೆ ಇನ್ಮುಂದೆ ಶೇ 40 ರ ಜಿಎಸ್‌ಟಿ ಪಾವತಿಸಬೇಕಾಗಲಿದೆ.
ಸಿಗರೇಟ್, ಸಿಗಾರ್, ಪಾನ್ ಮಸಾಲ, ಜರ್ದಾ, ಬೀಡಿ, ತಂಬಾಕು, ಜಗಿಯುವ ವಸ್ತುಗಳು ಇನ್ಮುಂದೆ 40 ಪರ್ಸೆಂಟ್ ಜಿಎಸ್‌ಟಿ ಅಡಿಯಲ್ಲಿ ಬರುತ್ತವೆ. ಅಧಿಕ ಸಕ್ಕರೆ ಅಂಶ ಇರುವ ಪಾನೀಯಗಳು, ಸೋಡಾ, ಕೂಲ್ ಡ್ರಿಂಕ್ಸ್, ಹಣ್ಣಿನ ಕಾರ್ಬೊನೇಟೆಡ್ ಪಾನಿಯಗಳು, ಕೆಫೀನ್ ಹೊಂದಿರುವ ಪಾನಿಯಗಳ ಮೇಲೆ ಶೇ 40ರಷ್ಟು ತೆರಿಗೆ ಬೀಳಲಿದೆ.
ಪ್ಲೈಟ್, ಹೆಲಿಕಾಪ್ಟರ್, ಐಷಾರಾಮಿ ಕಾರುಗಳು, 1500 ಸಿಸಿಗಿಂತ ಹೆಚ್ಚು, 4,000 ಮಿ.ಮೀ ಉದ್ದವಿರುವ ಕಾರುಗಳು, 350 ಸಿಸಿಗಿಂತ ಹೆಚ್ಚಿನ ಸಾಮರ್ಥ್ಯದ ಬೈಕ್ಗಳ ದರಗಳು ಇನ್ನಷ್ಟು ದುಬಾರಿಯಾಗಲಿವೆ. ಖಾಸಗಿ ವಿಮಾನ, ಹೆಲಿಕಾಪ್ಟರ್ ಬಳಕೆ, ಮನರಂಜನೆಗೆ ದೋಣಿ, ಇತರ ಹಡಗುಗಳ ಬಳಕೆ, ಹೆಚ್ಚು ಸಾಮರ್ಥ್ಯದ ರಿವಾಲ್ವಾರ್, ಪಿಸ್ತೂಲ್ಗಳ ಮೇಲೆ ಶೇ 40 ರ ಸ್ಲ್ಯಾಬ್ ಇರಲಿದೆ.
ನಿಮ್ಮ ಪ್ರತಿಕ್ರಿಯೆ ಏನು?