Hassan: ಮನೆಯಲ್ಲೇ ನಿಗೂಢ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ದಂಪತಿ ಸಾವು
ಹಾಸನ: ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಹಳೇಆಲೂರು ಗ್ರಾಮದಲ್ಲಿ ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ನಿಗೂಢ ಸ್ಫೋಟ ಸಂಭವಿಸಿತ್ತು.. ಇದರ ಪರಿಣಾಮ ದಂಪತಿಗಳು ತಂಗಿದ್ದ ಮನೆಯೊಂದು ಛಿದ್ರ ಛಿದ್ರಗೊಂಡ ಘಟನೆ ಜನರನ್ನು ಬೆಚ್ಚಿಬೀಳಿಸುವಂತೆ ಮಾಡಿತ್ತು.
ಇದೀಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಖಾಸಗಿ ಕಂಪನಿ ಉದ್ಯೋಗಿಯಾದ ಸುದರ್ಶನ್ ಆಚಾರ್ (32)ಮತ್ತು ಪತ್ನಿ ಕಾವ್ಯಾ (27) ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.ಸೋಮವಾರ ರಾತ್ರಿ ಹಿಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.
ರಾತ್ರಿಯೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಝೀರೋ ಟ್ರಾಫಿಕ್‌ನಲ್ಲಿ ರವಾನೆ ಮಾಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನಿಮ್ಮ ಪ್ರತಿಕ್ರಿಯೆ ಏನು?