Haveri Hindu Girl Incident: ಸ್ವಾತಿ ರಮೇಶ್ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್! ಇದೇ ಕಾರಣಕ್ಕೆ ಮೂವರಿಂದ ಸ್ವಾತಿ ಕೊಲೆ?

ಮಾರ್ಚ್ 14, 2025 - 21:01
 0  21
Haveri Hindu Girl Incident: ಸ್ವಾತಿ ರಮೇಶ್ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್! ಇದೇ ಕಾರಣಕ್ಕೆ ಮೂವರಿಂದ ಸ್ವಾತಿ ಕೊಲೆ?

ಹಾವೇರಿ ಜಿಲ್ಲೆಯಲ್ಲಿ ಒಂದು ಭೀಕರ ಘಟನೆಯೊಂದು ನಡೆದಿದ್ದು, ಕಳೆದ ಮಾರ್ಚ್ 6 ರಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಪತ್ತೆಪುರ ಬಳಿ ಅಪರಿಚಿತ ಯುವತಿ ಶವ ಪತ್ತೆಯಾಗಿತ್ತು. ಮೊದಲಿಗೆ ಯು.ಡಿ.ಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಹಲಗೇರಿ ಠಾಣೆ ಪೊಲಿಸರು ಯುವತಿ ಶವದ ಮರಣೋತ್ತರ ಪರೀಕ್ಷೆ ಮಾಡಿ ಅಂತ್ಯಸಂಸ್ಕಾರ ಕೂಡಾ ಮಾಡಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಯುವತಿಯನ್ನು ಯಾರೋ ಕೊಲೆ ಮಾಡಿ ತುಂಗಭದ್ರಾ ನದಿಯಲ್ಲಿ ಬಿಸಾಡಿ ಹೋಗಿರುವುದು ಬೆಳಕಿಗೆ ಬಂದಿತ್ತು.

ತನಿಖೆ ಆರಂಭಿಸಿದ ಪೊಲೀಸರಿಗೆ ಅದು ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಎಂಬ ಯುವತಿ ಶವ ಎನ್ನುವುದು ಗೊತ್ತಾಗಿದ್ದು, ತನಿಖೆ ತೀವ್ರಗೊಳಿಸಿದಾಗ ಸ್ವಾತಿ ಹಂತಕ ನಯಾಜ್ ಎನ್ನುವುದು ದೃಢಪಟ್ಟಿದ್ದು, ಇದೀಗ ನಯಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಅರೆಸ್ಟ್‌ ಮಾಡಿದ್ದಾರೆ. ನಯಾಜ್ ಹಾಗೂ ವಿನಯ್ , ದುರ್ಗಾಚಾರಿ ಎಂಬ ಯುವಕರೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿ ನಯಾಜ್ ಹಿರೇಕೇರೂರು ತಾಲೂಕು ಹಳೆ ವಿರಾಪುರ ಗ್ರಾಮದವನು. ಕೊಲೆಯಾದ ಸ್ವಾತಿ ಹಾಗೂ ಕೊಲೆ ಮಾಡಿದ ಮೂವರು ಆರೋಪಿಗಳು ಹೋರಿ ಬೆದರಿಸುವ ಸ್ಪರ್ಧೆ ಅಭಿಮಾನಿಗಳು. ಹೋರಿ ಬೆದರಿಸೋ ಸ್ಪರ್ಧೆ ಇದ್ದರೆ ಅಲ್ಲಿ ಹಾಜರಾಗ್ತಿದ್ದ ಸ್ವಾತಿಗೆ ಹೋರಿ ಬೆದರಿಸೋ ಸ್ಪರ್ಧೆ  ಕ್ರೇಜ್ ಇತ್ತು.

ಈ ವೇಳೆ ನಯಾಜ್ , ವಿನಯ್ ದುರ್ಗಾಚಾರಿ ನಡುವೆ ಸ್ನೇಹ ಬೆಳೆದಿದೆ. ಬಳಿಕ ಆರೋಪಿ ನಯಾಜ್ ಹಾಗೂ ಸ್ವಾತಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ನಯಾಜ್ ಸ್ವಾತಿಯನ್ನು ಬಿಟ್ಟು ತಮ್ಮ ಧರ್ಮದ ಯುವತಿ ಜೊತೆ ಮದುವೆಯಾಗಲು ಬಯಸಿದ್ದ. ಇದರಿಂದ ರೊಚ್ಚಿಗೆದ್ದಿದ್ದ ಸ್ವಾತಿ ನನಗೆ ಮೋಸ ಮಾಡಬೇಡ ಎಂದು ಜಗಳ ಮಾಡಿದ್ದಾಳೆ. ಈ ವೇಳೆ ಸ್ವಾತಿ ನಯಾಜ್ ನಿಂದ ದೂರವಿರುವಂತೆ ವಿನಯ್ ಮತ್ತು ದುರ್ಗಾಚಾರಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಆದರೆ ಸ್ವಾತಿ ಒಪ್ಪದಿದ್ದಾಗ ಮೂವರು ಸೇರಿ ದುಪ್ಪಟ್ಟದಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾರೆ.

ನಂತರ ಶವವನ್ನು ತುಂಗಭದ್ರಾ ನದಿಗೆ ಎಸೆದು ಪರಾರಿಯಾಗಿದ್ದಾರೆ. ಸ್ವಾತಿಯ ತಾಯಿ ಶಶಿಕಲಾ ಅವರು ಮಗಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು, ಹರಿಹರ ಮತ್ತು ಹೊಳೆಸಿರಿಗೇರಿ ನಡುವೆ ತುಂಗಭದ್ರಾ ನದಿಯಲ್ಲಿ ಪತ್ತೆಯಾದ ಅಪರಿಚಿತ ಶವ ಸ್ವಾತಿಯದ್ದು ಎಂದು ಗುರುತಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹಾವೇರಿ ಪೊಲೀಸರು ಆರೋಪಿ ನಯಾಜ್ ನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ವಿನಯ್ ಮತ್ತು ದುರ್ಗಾಚಾರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಹಾವೇರಿ ಎಸ್ಪಿ ಅಂಶುಕುಮಾರ್ ತಿಳಿಸಿದ್ದಾರೆ.

ದಿ.02 ರಂದು ಹತ್ಯೆಗೈದು ನದಿಗೆ ಹೆಣ ಬಿಸಾಕಿ ಎಸ್ಕೇಪ್ ಆಗಿದ್ದರು. ದಿ.6 ರಂದು ಹರಿಹರ & ಹೊಳೆಸಿರಿಗೇರಿ ಮಧ್ಯದಲ್ಲಿ ಆ ಯುವತಿಯ ಶವ ಪತ್ತೆಯಾಗಿದೆ. ಅಪರಿಚಿತ ಶವ ಪತ್ತೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದರು. ಸದ್ಯ ತನಿಖೆಯಲ್ಲಿ ಸ್ವಾತಿ ಹತ್ಯೆಯ ಸತ್ಯ ಬಯಲಾಗಿದ್ದು, ಕೊಲೆ ಆರೋಪಿ ನಯಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow