Health Tips: ನಿಮ್ಮ ಹಲವು ಆರೋಗ್ಯ ಸಮಸ್ಯೆಗಳಿಗೆ ನುಗ್ಗೆ ಸೊಪ್ಪಿನಲ್ಲಿದೆ ಪರಿಹಾರ..!

ನುಗ್ಗೆಕಾಯಿ, ನುಗ್ಗೆ ಸೊಪ್ಪು, ನುಗ್ಗೆಕಾಯಿ ಹೂವು ಎಲ್ಲದರಲ್ಲಿಯೂ ಔಷಧಿಯ ಗುಣವಿದೆ. ಅದರಲ್ಲಿಯೂ ನುಗ್ಗೆಕಾಯಿ ಎಲೆಗಳು ಉತ್ಕರ್ಷಣ ನಿರೋಧಕಗಳು, ಉರಿಯೂತದ ಗುಣಲಕ್ಷಣಗಳು, ಪ್ರೋಟೀನ್ಗಳು, ಕ್ಯಾಲ್ಸಿಯಂ ಮತ್ತು ಮಧುಮೇಹ ವಿರೋಧಿ ಗುಣಗಳಿಂದ ಸಮೃದ್ಧವಾಗಿವೆ. ಇದು ನಿಮ್ಮ ಅನೇಕ ಸಮಸ್ಯೆಗಳನ್ನು ಪರಿಹರಿಸುತ್ತದೆ.
ಆರೋಗ್ಯ ಸಮಸ್ಯೆಗಳಿಗೆ ನುಗ್ಗೆ ಸೊಪ್ಪಿನ ಮನೆ ಮದ್ದುಗಳು ಇಲ್ಲಿದೆ
* ನುಗ್ಗೆ ಸೊಪ್ಪಿನಿಂದ ಸಾರು ತಯಾರಿಸಿ, ಅದಕ್ಕೆ ಬೆಳ್ಳುಳ್ಳಿ ರಸ ಬೆರೆಸಿ ಕುಡಿದರೆ ಜ್ವರ ಕಡಿಮೆಯಾಗುತ್ತದೆ.
* ನುಗ್ಗೆ ಸೊಪ್ಪಿನ ರಸವನ್ನು ಕುದಿಸಿ ಕುಡಿಯುತ್ತಿದ್ದರೆ ಮಲಬದ್ಧತೆ ಸಮಸ್ಯೆ ಯೂ ದೂರವಾಗುತ್ತದೆ.
* ನುಗ್ಗೆಸೊಪ್ಪು, ಹೆಚ್ಚಿದ ಶುಂಠಿ, ಹರಳು ಗಿಡದ ಎಲೆ, ತುಳಸಿ ಎಲೆಗಳನ್ನು ಎಳ್ಳೆಣ್ಣೆಯಲ್ಲಿ ಹುರಿದು ಬಟ್ಟೆಯಲ್ಲಿ ಕಟ್ಟಿ ಬೆನ್ನುನೋವು ಇರುವ ಜಾಗಕ್ಕೆ ಬಿಸಿ ಶಾಖವಿಟ್ಟರೆ ಬೆನ್ನುನೋವು ಕಡಿಮೆಯಾಗುತ್ತದೆ.
* ನುಗ್ಗೆಸೊಪ್ಪು, ತುಳಸಿ ಎಲೆಗಳನ್ನು ಹುರಿದು ಕೀಲುನೋವಿರುವ ಜಾಗಕ್ಕೆ ಶಾಖವನ್ನು ಕೊಟ್ಟರೆ ನೋವು ನಿವಾರಣೆಯಾಗುತ್ತದೆ.
* ತಲೆ ನೋವಿನಿಂದ ಬಳಲುತ್ತಿರುವವರು ನುಗ್ಗೆ ಸೊಪ್ಪಿನ ಒಂದು ತೊಟ್ಟು ರಸವನ್ನು ಕಿವಿಗೆ ಹಾಕುತ್ತಿದ್ದರೆ ತಲೆನೋವು ಕಡಿಮೆಯಾಗುತ್ತದೆ.
* ನುಗ್ಗೆ ಸೊಪ್ಪನ್ನು ನೀರಿನಲ್ಲಿ ಬೇಯಿಸಿ ರಸ ತೆಗೆದು ಅದಕ್ಕೆ ಅಡಿಗೆ ಉಪ್ಪು ನಿಂಬೆರಸ, ಕಾಳು ಮೆಣಸಿನ ಪುಡಿಯನ್ನು ಬೆರೆಸಿ ಪ್ರತಿದಿನ ಬೆಳಗ್ಗೆ ಸೇವಿಸಿದರೆ ಸಂಭೋಗದ ಶಕ್ತಿಯು ವೃದ್ಧಿಯಾಗುತ್ತದೆ.
* ನುಗ್ಗೆ ಸೊಪ್ಪನ್ನು ನುಣ್ಣಗೆ ರುಬ್ಬಿ ಮೂಲವ್ಯಾಧಿ ಮೊಳಕೆಗಳಿಗೆ ಹಚ್ಚುವುದರಿಂದ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
* ಬೇಯಿಸಿ ತೆಗೆದ ನುಗ್ಗೆ ಸೊಪ್ಪಿನ ರಸಕ್ಕೆ ಹಾಲು ಸಕ್ಕರೆ ಬೆರೆಸಿ ಮಕ್ಕಳಿಗೆ ಕುಡಿಸುವುದರಿಂದ ರಕ್ತವು ಶುದ್ಧಿಯಾಗುತ್ತದೆ.
* ನುಗ್ಗೆ ಸೊಪ್ಪನ್ನು ಬೇಯಿಸಿ ರಸ ತೆಗೆದು ಅದಕ್ಕೆ ನಿಂಬೆರಸ ಹಿಂಡಿ ಒಂದು ವಾರಗಳ ಕಾಲ ಸೇವಿಸಿದರೆ ತಲೆಸುತ್ತುವ ಸಮಸ್ಯೆಯೂ ದೂರವಾಗುತ್ತದೆ.
ನಿಮ್ಮ ಪ್ರತಿಕ್ರಿಯೆ ಏನು?






