Himachal Pradesh: 200 ಅಡಿ ಕಂದಕಕ್ಕೆ ಬಿದ್ದ ಬಸ್..! ಸ್ಥಳದಲ್ಲೇ ಇಬ್ಬರು ಸಾವು - 25 ಮಂದಿಗೆ ಗಾಯ

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರ 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಜಿಲ್ಲೆಯ ಕಲ್ಖರ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ತಲುಪಿ ಜನರೊಂದಿಗೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಸ್ತುತ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನಿಮ್ಮ ಪ್ರತಿಕ್ರಿಯೆ ಏನು?






