HMPV Virus: ಬೆಂಗಳೂರಿನಲ್ಲೂ ಕಾಣಿಸಿಕೊಂಡ HMPV ವೈರಸ್! ಇಬ್ಬರು ಮಕ್ಕಳಲ್ಲಿ ಸೋಂಕು ಪತ್ತೆ

ಜನವರಿ 6, 2025 - 13:34
 0  23
HMPV Virus: ಬೆಂಗಳೂರಿನಲ್ಲೂ ಕಾಣಿಸಿಕೊಂಡ HMPV ವೈರಸ್! ಇಬ್ಬರು ಮಕ್ಕಳಲ್ಲಿ ಸೋಂಕು ಪತ್ತೆ

ಬೆಂಗಳೂರು: ಕೋವಿಡ್ ವೈರಸ್ ಕಾಣಿಸಿಕೊಂಡ ಐದು ವರ್ಷದ ಬಳಿಕ ಮತ್ತೆ ದೇಶದಲ್ಲಿ ವೈರಸ್ ಹಾವಳಿ ಶುರುವಾಗಿದೆ. ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಏಕಾಏಕಿ ಚೀನಾದಲ್ಲಿ ಹರಡುತ್ತಿದ್ದು, ಈ ನಡುವೆ ಬೆಂಗಳೂರಿಗೂ ಈ ವೈರಸ್ ಎಂಟ್ರಿ ಕೊಟ್ಟಿದೆ. ಬೆಂಗಳೂರಿನಲ್ಲಿ ಟ್ರಾವೆಲ್‌ ಹಿಸ್ಟರಿ ಇಲ್ಲದ ಎರಡು ಪ್ರಕರಣಗಳು ಪತ್ತೆಯಾಗಿದೆ.

ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೃಢಪಡಿಸಿದೆ. 3 ತಿಂಗಳ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದರೆ 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಾಣುತ್ತಿದೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ ಐಸಿಎಂಆರ್‌, ದೇಶದಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ ಮಾಡಲು ICMR ನ ನಡೆಸುತ್ತಿರುವ ಪ್ರಯತ್ನಗಳ ಭಾಗವಾಗಿ ಎರಡೂ ಪ್ರಕರಣಗಳನ್ನು ಗುರುತಿಸಲಾಗಿದೆ. HMPV ಭಾರತ ಸೇರಿದಂತೆ ವಿಶ್ವಾದ್ಯಂತ ಹರಡಿದ್ದು, ಹಲವು ದೇಶಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow