ICC Champions Trophy: ಇಂದು ಭಾರತಕ್ಕೆ ಮೊದಲ ಪಂದ್ಯ: ಬಾಂಗ್ಲಾ ವಿರುದ್ದ ಗೆಲುವಿಗೆ ರೋಹಿತೆ ಪಡೆ ಸಜ್ಜು

ಫೆಬ್ರವರಿ 20, 2025 - 10:10
 0  10
ICC Champions Trophy: ಇಂದು ಭಾರತಕ್ಕೆ ಮೊದಲ ಪಂದ್ಯ: ಬಾಂಗ್ಲಾ ವಿರುದ್ದ ಗೆಲುವಿಗೆ ರೋಹಿತೆ ಪಡೆ ಸಜ್ಜು

 

 ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಚಾಲನೆ ಸಿಕ್ಕಿದೆ. ಚಾಂಪಿಯನ್ಸ್ ಟ್ರೋಫಿ ಕೊನೆ ಬಾರಿಗೆ ನಡೆದಿದ್ದು 2017ರಲ್ಲಿ. ಆ ನಂತರ ಕ್ರಿಕೆಟ್ ಜಗತ್ತಿನಲ್ಲೇ ಹಲವು ಐಸಿಸಿ ಟೂರ್ನಿಗಳು ನಡೆದಿವೆ. ಆದರೆ ಚಾಂಪಿಯನ್ಸ್​ ಟ್ರೋಫಿ ನಡೆಯಲಿಲ್ಲ. ಇದೀಗ ಚಾಲನೆ ಸಿಕ್ಕಿದೆ. ಬಾಂಗ್ಲಾದೇಶ ತಂಡದ ವಿರುದ್ಧ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಮೆನ್ ಇನ್ ಬ್ಲ್ಯೂ, ಟೂರ್ನಿಯಲ್ಲಿ ಶುಭಾರಂಭದ ನಿರೀಕ್ಷೆಯಲ್ಲಿದೆ.

ಹೌದು ಲೀಗ್ ಹಂತದ ಮೊದಲ ಪಂದ್ಯದಲ್ಲೇ ಗೆಲ್ಲುವ ಮೂಲಕ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸುವ ಇರಾದೆಯಲ್ಲಿದೆ. ಇದಾಗ್ಯೂ ಬಾಂಗ್ಲಾದೇಶ್ ತಂಡವನ್ನು ಹಗುರವಾಗಿ ಪರಿಗಣಿಸುವಂತಿಲ್ಲ.

ಏಕೆಂದರೆ ಟೀಮ್ ಇಂಡಿಯಾ ದುಬೈನಲ್ಲಿ ಏಕದಿನ ಪಂದ್ಯವಾಡಿ ವರ್ಷಗಳೇ ಕಳೆದಿವೆ. ಅದರಲ್ಲೂ ಅಲ್ಲಿನ ಪಂದ್ಯಗಳಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸುತ್ತದೆ. ಹೀಗಾಗಿ ಭಾರತ ಮತ್ತು ಬಾಂಗ್ಲಾದೇಶ್ ನಡುವಿನ ಪಂದ್ಯದಲ್ಲಿ ಉತ್ತಮ ಪೈಪೋಟಿ ನಿರೀಕ್ಷಿಸಬಹುದು.

ಮುಖಾಮುಖಿ ದಾಖಲೆ:

ಏಕದಿನ ಕ್ರಿಕೆಟ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಒಟ್ಟು 41 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 32 ಬಾರಿ ಜಯ ಸಾಧಿಸಿದರೆ, ಬಾಂಗ್ಲಾದೇಶ್ 8 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಮ್ಯಾಚ್ ಕಾರಣಾಂತರಗಳಿಂದ ರದ್ದಾಗಿತ್ತು.

ಎಷ್ಟು ಗಂಟೆಗೆ ಪಂದ್ಯ ಶುರು?

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 2.30 ರಿಂದ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆ 2 ಗಂಟೆಗೆ ನಡೆಯಲಿದೆ.

ಯಾವ ಚಾನೆಲ್‌ನಲ್ಲಿ ನೇರ ಪ್ರಸಾರ?

ಈ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ ಸ್ಟಾರ್ ಆ್ಯಪ್ ಹಾಗೂ ವೆಬ್ ಸೈಟ್‌ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ಉಭಯ ತಂಡಗಳು:

ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

ಬಾಂಗ್ಲಾದೇಶ್: ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಸೌಮ್ಯ ಸರ್ಕಾರ್, ತಂಝಿದ್ ಹಸನ್, ತೌಹಿದ್ ಹೃದಯೊಯ್, ಮುಶ್ಫಿಕರ್ ರಹೀಮ್, ಎಂಡಿ ಮಹ್ಮದ್ ಉಲ್ಲಾ, ಜೇಕರ್ ಅಲಿ ಅನಿಕ್, ಮೆಹಿದಿ ಹಸನ್ ಮಿರಾಜ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್, ತಸ್ಕಿನ್ ಅಹ್ಮದ್, ಪರ್ವೆಜ್ ನಸ್ಸಾನ್, ತಸ್ಕಿನ್ ಎ. ಸಾಕಿಬ್, ನಹಿದ್ ರಾಣಾ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow