IND vs NZ 1st Test: ನ್ಯೂಝಿಲೆಂಡ್ ವಿರುದ್ಧ ಹೀನಾಯವಾಗಿ ಸೋತ ಟೀಮ್ ಇಂಡಿಯಾ!

ಬೆಂಗಳೂರು: ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತದ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಇದು 36 ವರ್ಷಗಳ ಬಳಿಕ ಭಾರತದಲ್ಲಿ ನ್ಯೂಜಿಲೆಂಡ್ ಗೆ ಸಿಕ್ಕ ಮೊದಲ ಜಯವಾಗಿದೆ. 1988ರಲ್ಲಿ ಕೊನೆಯ ಬಾರಿಗೆ ನ್ಯೂಜಿಲೆಂಡ್ ಭಾರತದಲ್ಲಿ ತನ್ನ ಕೊನೆಯ ಟೆಸ್ಟ್ ಪಂದ್ಯ ಗೆದ್ದಿತ್ತು.
ಮೊದಲ ಇನ್ನಿಂಗ್ಸ್ನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 402 ರನ್ಗಳಿಗೆ ಆಲೌಟ್ ಆಗಿತ್ತು. ಇದರಲ್ಲಿ ಟೀಮ್ ಸೌತಿ 65, ಡಿವೋನ್ ಕಾನ್ವೆ 91, ರಚಿನ್ ರವೀಂದ್ರ 134 ರನ್ಗಳನ್ನ ಗಳಿಸಿ ತಂಡಕ್ಕೆ ಕೊಡುಗೆ ನೀಡಿದ್ದರು. ಇದರಿಂದ 356ರನ್ಗಳ ಲೀಡ್ ಪಡೆದುಕೊಂಡಿತ್ತು. ಬಳಿಕ 2ನೆ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡಿದ್ದ ರೋಹಿತ್ ಶರ್ಮಾ ನೇತೃತ್ವದ ಟೀಮ್ ಬೃಹತ್ ಮೊತ್ತ ಕಲೆ ಹಾಕಿತ್ತು. ರೋಹಿತ್ 50, ಕೊಹ್ಲಿ 70, ರಿಷಬ್ ಪಂತ್ 99 ಹಾಗೂ ಸರ್ಫರಾಜ್ ಅವರ 150 ರನ್ಗಳ ನೆರವಿನಿಂದ ಭಾರತ ಒಟ್ಟು 462 ರನ್ಗಳನ್ನು ಕಲೆ ಹಾಕಿತ್ತು.
ಇದರಿಂದ ಭಾರತ 107 ರನ್ಗಳ ಟಾರ್ಗೆಟ್ ಅನ್ನು ಎದುರಾಳಿಗೆ ನೀಡಿತ್ತು. ಈ ಸುಲಭ ಟಾರ್ಗೆಟ್ ಬೆನ್ನು ಹತ್ತಿದ್ದ ನ್ಯೂಜಿಲೆಂಡ್ ಟೀಮ್ 2ನೇ ಇನ್ನಿಂಗ್ಸ್ನಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 107 ರನ್ಗಳ ಗುರಿ ಮುಟ್ಟುವಲ್ಲಿ ಯಶಸ್ವಿಯಾಗಿ ಗೆಲುವು ದಾಖಲಿಸಿದೆ. ಮೊದಲ ಟೆಸ್ಟ್ನ ಕೊನೆ ದಿನದಲ್ಲಿ 8 ವಿಕೆಟ್ಗಳಿಂದ ನ್ಯೂಜಿಲೆಂಡ್ ಗೆದ್ದು ಬೀಗಿದೆ. ರಚಿನ್ ರವೀಂದ್ರ ಅವರಿಗೆ ಪ್ಲೇಯರ್ ಆಫ್ ದೀ ಮ್ಯಾಚ್ ಪ್ರಶಸ್ತಿ ನೀಡಲಾಗಿದೆ. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಪಡೆದಿದೆ.
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






