IND vs NZ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ಹಣಾಹಣಿ: ಟಾಸ್ ಗೆದ್ದ ಕಿವೀಸ್

ಮಾರ್ಚ್ 9, 2025 - 14:38
 0  14
IND vs NZ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ಹಣಾಹಣಿ: ಟಾಸ್ ಗೆದ್ದ ಕಿವೀಸ್

 

 

 

 

 

 

 

 

 

 

 

 

 

 

ಚಾಂಪಿಯನ್ಸ್ ಟ್ರೋಫಿ 2025 ಫೈನಲ್ ಪಂದ್ಯವು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯುತ್ತಿದೆ. ಎರಡೂ ತಂಡಗಳು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. 25 ವರ್ಷಗಳ ನಂತರ ಟೂರ್ನಿಯ ಫೈನಲ್ನಲ್ಲಿ ಎರಡೂ ತಂಡಗಳು ಪರಸ್ಪರ ಎದುರಾಗುತ್ತಿವೆ.

ಇದಕ್ಕೂ ಮೊದಲು, ಭಾರತ ತಂಡ ಗುಂಪು ಹಂತದಲ್ಲಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಅದೇ ಸಮಯದಲ್ಲಿ, ಎರಡೂ ತಂಡಗಳು ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಎರಡನೇ ಬಾರಿಗೆ ಫೈನಲ್ನಲ್ಲಿ ಮುಖಾಮುಖಿಯಾಗಲಿವೆ. ಇದಕ್ಕೂ ಮೊದಲು 2002 ರಲ್ಲಿ, ನ್ಯೂಜಿಲೆಂಡ್ ಭಾರತವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದಿತ್ತು.

ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ತಂಡ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.

ಇನ್ನು ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಂದರೆ ಕಳೆದ ಮ್ಯಾಚ್ನಲ್ಲಿ ಕಣಕ್ಕಿಳಿದ ಆಡುವ ಬಳಗವನ್ನೇ ಪಂದ್ಯದಲ್ಲೂ ಮುಂದುವರೆಸಲಾಗಿದೆ. ಮತ್ತೊಂದೆಡೆ ನ್ಯೂಝಿಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅದರಂತೆ ಮ್ಯಾಟ್ ಹೆನ್ರಿ ಬದಲಿಗೆ ನಾಥನ್ ಸ್ಮಿತ್ ಕಣಕ್ಕಿಳಿದಿದ್ದಾರೆ.

 ನ್ಯೂಜಿಲೆಂಡ್

ಮಿಚೆಲ್ ಸ್ಯಾಂಟ್ನರ್ (ನಾಯಕ), ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್, ಮೈಕೆಲ್ ಬ್ರೇಸ್ವೆಲ್, ಕೈಲ್ ಜೇಮಿಸನ್, ವಿಲ್ ರೂರ್ಕ್, ನಾಥನ್ ಸ್ಮಿತ್.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow