IND vs PAK: ಇಂದು ಭಾರತ - ಪಾಕ್ ಮಹಾಯುದ್ಧ: ಹೈವೋಲ್ಟೇಜ್ ಪಂದ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ

ಫೆಬ್ರವರಿ 23, 2025 - 10:02
 0  13
IND vs PAK: ಇಂದು ಭಾರತ - ಪಾಕ್ ಮಹಾಯುದ್ಧ: ಹೈವೋಲ್ಟೇಜ್ ಪಂದ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವು ಇಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಕಾಳಗವನ್ನು ಕಣ್ತುಂಬಿಕೊಳ್ಳಲು ಉಭಯ ರಾಷ್ಟ್ರಗಳ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದು, ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. 

* ಭಾರತ vs ಪಾಕಿಸ್ತಾನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಪಾಕಿಸ್ತಾನ ನಡುವಿನ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯವು ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

* ಭಾರತ vs ಪಾಕಿಸ್ತಾನ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಪ್ರಾರಂಭವಾಗಲಿದೆ. ಟಾಸ್ ಅರ್ಧ ಗಂಟೆ ಮುಂಚಿತವಾಗಿ ಮಧ್ಯಾಹ್ನ 2:00 ಗಂಟೆಗೆ ನಡೆಯಲಿದೆ.

* ಭಾರತ vs ಪಾಕಿಸ್ತಾನ ಪಂದ್ಯದ ವೀಕ್ಷಣೆ ಹೇಗೆ?

ಭಾರತ ಮತ್ತು ಪಾಕಿಸ್ತಾನ ಪಂದ್ಯವನ್ನು ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಮೂಲಕ ಟಿವಿಯಲ್ಲಿ ನೇರಪ್ರಸಾರವನ್ನು ವೀಕ್ಷಿಸಬಹುದು. ಅದೇ ರೀತಿ ಲೈವ್‌ ಸ್ಟ್ರೀಮಿಂಗ್‌ನ್ನು JioHotstar ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು.

ಭಾರ vs ಪಾಕ್‌ ಬಲಾಬಲ:

ಭಾರತ ಮತ್ತು ಪಾಕಿಸ್ತಾನ ನಡುವೆ ಇದುವರೆಗೆ ಒಟ್ಟು 135 ಏಕದಿನ ಕ್ರಿಕೆಟ್ ಪಂದ್ಯಗಳು ನಡೆದಿವೆ. ಇವುಗಳಲ್ಲಿ ಟೀಮ್ ಇಂಡಿಯಾ 57 ಪಂದ್ಯಗಳಲ್ಲಿ ಮತ್ತು ಪಾಕಿಸ್ತಾನ 73 ಪಂದ್ಯಗಳಲ್ಲಿ ಜಯಗಳಿಸುವಲ್ಲಿ ಯಶಸ್ವಿಯಾಗಿದೆ. ಐದು ಪಂದ್ಯಗಳಲ್ಲಿ ಫಲಿತಾಂಶ ಬಂದಿಲ್ಲ. ಏಕದಿನ ಮಾದರಿಯಲ್ಲಿ ಇಬ್ಬರ ನಡುವೆ ಯಾವುದೇ ಪಂದ್ಯ ಟೈ ಆಗಿಲ್ಲ. ಆದರೆ ಈ ಅಂಕಿಅಂಶದ ಜೊತೆಗೆ ದುಬೈ ಸ್ಟೇಡಿಯಂನಲ್ಲಿ ಸಹ ಪಾಕ್‌ ತಂಡವು ಭಾರತಕ್ಕಿಂತ ಉತ್ತಮ ದಾಖಲೆ ಹೊಂದಿದೆ. ಇತ್ತ ಕಳೆದ 8 ವರ್ಷಗಳಿಂದ ನಡುವುದಾದರೆ ಭಾರತವೇ ಮೈಲುಗೈ ಸಾಧಿಸಿದೆ.

ಉಭಯ ತಂಡಗಳು:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜ, ವರುಣ್ ಚಕ್ರವರ್ತಿ.

ಪಾಕಿಸ್ತಾನ ತಂಡ: ಇಮಾಮ್ ಉಲ್ ಹಕ್, ಬಾಬರ್ ಅಜಮ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ವಾರ), ಸಲ್ಮಾನ್ ಆಘಾ, ತಯ್ಯಬ್ ತಾಹಿರ್, ಖುಷ್ದಿಲ್ ಶಾ, ಶಾಹೀನ್ ಅಫ್ರಿದಿ, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಅಬ್ರಾರ್ ಅಹ್ಮದ್, ಕಮ್ರಾನ್ ಗುಲಾಮ್, ಫಹೀಮ್ ಅಶ್ರಫ್, ಹರಿಸ್ ರೌಫ್, ಅಕಿಫ್ ಜಾವೇದ್, ಉಸ್ಮಾನ್ ಖಾನ್.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow