Independence Day: ಇತಿಹಾಸ, ಮಹತ್ವ, ನೀವು ತಿಳಿದಿರಲೇಬೇಕಾದ ಸಂಗತಿಗಳಿವು..!

ಆಗಸ್ಟ್ 15, 2025 - 07:01
 0  16
Independence Day: ಇತಿಹಾಸ, ಮಹತ್ವ, ನೀವು ತಿಳಿದಿರಲೇಬೇಕಾದ ಸಂಗತಿಗಳಿವು..!

79ನೇ ವರ್ಷದ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಸಡಗರ ಸಂಭ್ರಮದ ಹೊಸ್ತಿಲಲ್ಲಿ ನಾವಿದ್ದೇವೆ. ಎಂದಿನಂತೆ ಶಾಲಾ ಕಾಲೇಜು, ಸರ್ಕಾರಿ ಸಂಸ್ಥೆಗಳಲ್ಲದೆ ಈ ಬಾರಿ ಮನೆ-ಮನಗಳಲ್ಲೂ ತಿರಂಗ ಹಾರುತ್ತಿದೆ. ಇಡೀ ದೇಶಕ್ಕೆ ದೇಶವೇ ಹಬ್ಬದ ವಾತಾವರಣದಲ್ಲಿ ಮಿಂದೆದ್ದಿದೆ. ಅಖಂಡ ಭಾರತದಲ್ಲಿ ಸ್ವಾಭಿಮಾನದ ಸ್ವಾತಂತ್ರ್ಯಕ್ಕಾಗಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿ ಹೋರಾಡಿದ ಹೋರಾಟಗಾರರ ಬಲಿದಾನ ತ್ಯಾಗಗಳ ಮೂಲಕ ಬಿಸಿನೆತ್ತರನ್ನು ಭಾರತ ಮಾತೆಯ ಮಡಿಲಿಗೆ ಹರಿಸಿ ನಮಗೆ ಕೊಟ್ಟ ಸ್ವಾತಂತ್ರ್ಯವನ್ನ ನಾವೆಲ್ಲರೂ ಸ್ಮರಿಸೋಣ ಮತ್ತು ಗೌರವಿಸೋಣ. 

ಸ್ವಾತಂತ್ರ್ಯ ಹೋರಾಟದ ಹಾದಿ

1857ರಿಂದ ಅಧಿಕೃತ ಆರಂಭವಾಗಿದ್ದ ಸ್ವಾತಂತ್ರ್ಯ ಹೋರಾಟದ ಕಿಚ್ಚು 90 ವರ್ಷಗಳ ನಿರಂತರ ಹೋರಾಟದ ಫಲವೇ 1947ರ ಆಗಸ್ಟ್ 15ರಂದು ಭಾರತಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಿತು. ಆ ಮೂಲಕ 200 ವರ್ಷಗಳ ಬ್ರಿಟಿಷರ ಆಡಳಿತ ಅಂತ್ಯವಾಯಿತು. ಸ್ವಾತಂತ್ರ್ಯಕ್ಕಾಗಿ 1857 ರಿಂದ 1947 ರವರೆಗೂ ನಿರಂತರ ಹೋರಾಟ ಮಾಡಲಾಗಿದೆ. ಬ್ರಿಟಿಷ್ ಆಡಳಿತದ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ಅವಿರತ ಸಾಧನೆಯನ್ನು ಇಂದು ನಾವು ಸ್ಮರಿಸಲಾಗುತ್ತದೆ.

ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಮತ್ತು ಇತರೆ ಅನೇಕರ ನೇತೃತ್ವದಲ್ಲಿ ನಡೆದ ಹೋರಾಟಗಳು ಅಹಿಂಸಾತ್ಮಕ ಮತ್ತು ಕ್ರಾಂತಿಕಾರಿಯಾಗಿದ್ದವು. 1947ರ ಆಗಸ್ಟ್ 15ರಂದು, ಜವಾಹರಲಾಲ್ ನೆಹರೂ ಮೊದಲ ಪ್ರಧಾನಿಯಾಗುವುದರೊಂದಿಗೆ ಭಾರತವು ಅಂತಿಮವಾಗಿ ಸ್ವಾತಂತ್ರ್ಯವನ್ನು ಗಳಿಸಿತು. ಅವರ ಪ್ರಸಿದ್ಧ ಭಾಷಣವಾದ ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಭಾರತಕ್ಕೆ ಹೊಸ ಯುಗದ ಆರಂಭವಾಗಿತ್ತು.

ಮಹತ್ವ

ಸ್ವಾತಂತ್ರ್ಯ ದಿನವು ಪ್ರತಿಯೊಬ್ಬ ಭಾರತೀಯರಿಗೆ ಹೆಮ್ಮೆಯ ದಿನವಾಗಿದೆ. ಇದು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಸಂಖ್ಯಾತ ಮಹನೀಯರ ತ್ಯಾಗ, ಬಲಿದಾನವನ್ನು ಸ್ಮರಿಸಿಕೊಳ್ಳುವ ದಿನ. ಈ ದಿನವನ್ನು ಪ್ರಜಾಪ್ರಭುತ್ವದ ದಿನವೆಂದು ಕೂಡ ಕರೆಯುತ್ತಾರೆ. ದೆಹಲಿಯ ಕೆಂಪುಕೋಟೆ ಸೇರಿದಂತೆ ಭಾರತದಲ್ಲಿ ತಿರಂಗ ರಾರಾಜಿಸುತ್ತದೆ.

ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಥೀಮ್ 

ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ವಿಷಯವು ‘ವಿಕ್ಷಿತ್ ಭಾರತ,’ ಅಥವಾ ‘ಅಭಿವೃದ್ಧಿ ಹೊಂದಿದ ಭಾರತ’ ಆಗಿದೆ. ಇದು ಸ್ವಾತಂತ್ರ್ಯದ ಶತಮಾನೋತ್ಸವದ 2047 ರ ವೇಳೆಗೆ ರಾಷ್ಟ್ರವನ್ನು ಅಭಿವೃದ್ಧಿ ಹೊಂದಿದ ದೇಶವಾಗಿ ಪರಿವರ್ತಿಸುವ ಭಾರತ ಸರ್ಕಾರದ ದೃಷ್ಟಿಕೋನ ಹೊಂದಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಯನ್ನು ಆಚರಿಸುವಾಗ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಲು ಪ್ರತಿಯೊಬ್ಬ ನಾಗರಿಕನ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಾಮುಖ್ಯತೆಯನ್ನು ಇದು ಸಾರಿಹೇಳುತ್ತದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow