India Cricket Team: ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ ಭರ್ಜರಿ ಗಿಫ್ಟ್ ಕೊಟ್ಟ BCCI..!

9ನೇ ಆವೃತ್ತಿಯ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ಗೆದ್ದುಕೊಂಡಿದೆ. ದುಬೈನಲ್ಲಿ ನಡೆದ ಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ 4 ವಿಕೆಟ್ಗಳಿಂದ ಮಣಿಸಿತು. ಇದರೊಂದಿಗೆ 25 ವರ್ಷಗಳ ಹಿಂದೆ ಇದೇ ಟೂರ್ನಿಯ ಫೈನಲ್ನಲ್ಲಿ ಕಿವೀಸ್ ವಿರುದ್ಧ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಂಡಿದೆ. ಜೊತೆಗೆ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದು ದಾಖಲೆ ಬರೆಯಿತು.
ಇನ್ನೂ ಇದಕ್ಕೆ ಸಂಬಂಧೀಸಿದಂತೆ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 58 ಕೋಟಿ ರೂಪಾಯಿಗಳ ಬೃಹತ್ ನಗದು ಬಹುಮಾನ ಘೋಷಿಸಿದೆ. ಮಾ.9ರಂದು ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಭಾರತ ಗೆಲುವು ಸಾಧಿಸಿದ ಬಳಿಕ ಇಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 58 ಕೋಟಿ ರೂ.ಗಳ ನಗದು ಬಹುಮಾನವನ್ನು ಪ್ರಕಟಿಸಿದೆ.
ಕಳೆದ ವರ್ಷ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ.ಗಳ ನಗದು ಬಹುಮಾನ ನೀಡಿ ಗೌರವಿಸಿತ್ತು. ಪ್ರತಿಯೊಬ್ಬ ಆಟಗಾರನಿಗೆ ತಲಾ 3 ಕೋಟಿ ರೂ., ಮುಖ್ಯ ಕೋಚ್‌ಗೆ 3 ಕೋಟಿ ರೂ., ಸಹಾಯಕ ಕೋಚಿಂಗ್ ಸಿಬ್ಬಂದಿಗೆ ಮತ್ತಿತ್ತರಿಗೆ 50 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಪ್ರಕಟಣೆ ಮಾಡಿದ್ದಾರೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಟೂರ್ನಿಯ ಎಲ್ಲಾ ಪಂದ್ಯಗಳನ್ನು ಗೆದ್ದು ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಭಾರತ ತಂಡವು ಬಾಂಗ್ಲಾದೇಶ ವಿರುದ್ಧ ಆರು ವಿಕೆಟ್‌ಗಳ ಘನ ಗೆಲುವಿನೊಂದಿಗೆ ತನ್ನ ಅಭಿಯಾನವನ್ನು ಪ್ರಾರಂಭಿಸಿತು. ಪಾಕಿಸ್ತಾನ ವಿರುದ್ಧ ಆರು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ, ನ್ಯೂಜಿಲೆಂಡ್ ವಿರುದ್ಧ 44 ರನ್‌ಗಳ ಮೂಲಕ ಜಯಗಳಿಸಿದ್ದರು. " ಎಂದು ಬಿಸಿಸಿಐ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






