India vs Bangladesh: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾ..! ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಜೊತೆ ಕಣಕ್ಕಿಳಿದ ರೋಹಿತ್ ಪಡೆ

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ತನ್ನ ಅಭಿಯಾನ ಆರಂಭಿಸಿದೆ. ದುಬೈನಲ್ಲಿ ನಡೆಯುತ್ತಿರುವ ಈ ನಿರ್ಣಾಯಕ ಪಂದ್ಯದಲ್ಲಿ ಭಾರತದ ಗೆಲುವು ಅತ್ಯಂತ ಮುಖ್ಯ. ಇಂಗ್ಲೆಂಡ್ ವಿರುದ್ಧದ ಸರಣಿ ಗೆಲುವಿನಿಂದ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಜ್ಜಾಗಿದೆ.
ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಂಪಿಯನ್ ಟ್ರೋಫಿಯ 2ನೇ ಪಂದ್ಯ ನಡೆಯುತ್ತಿದೆ. ಇದರಲ್ಲಿ ಎದುರಾಳಿ ಬಾಂಗ್ಲಾದೇಶದ ಕ್ಯಾಪ್ಟನ್ ಹೊಸೈನ್ ಶಾಂಟೊ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತವನ್ನು ಫೀಲ್ಡಿಂಗ್ಗೆ ಆಹ್ವಾನ ಮಾಡಿದ್ದಾರೆ. ಚಾಂಪಿಯನ್ ಟ್ರೋಫಿಯ ಪಂದ್ಯದಲ್ಲಿ ಮೊದಲೇ ಯೋಜಿಸಿದಂತೆ ನಾಯಕ ರೋಹಿತ್ ಶರ್ಮಾ ಹಾಗೂ ಗಿಲ್ ಓಪನಿಂಗ್ ಬ್ಯಾಟಿಂಗ್ ಮಾಡಲಿದ್ದಾರೆ.
ವೇಗಿ ಮೊಹಮ್ಮದ್ ಶಮಿ, ಆರಂಭಿಕ ಆಟಗಾರ ಸೌಮ್ಯ ಸರ್ಕಾರ್ ಅವರನ್ನು ಮೊದಲ ಓವರ್‌ನಲ್ಲಿಯೇ ಔಟ್ ಮಾಡುವ ಮೂಲಕ ಬಾಂಗ್ಲಾದೇಶಕ್ಕೆ ಹೊಡೆತ ನೀಡಿದ್ದಾರೆ. 2ನೇ ಓವರ್ನಲ್ಲಿ ದಾಳಿಗಿಳಿದ ಯುವ ವೇಗಿ ಹರ್ಷಿತ್ ರಾಣಾ, ಬಾಂಗ್ಲಾ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂಟೋ ಅವರನ್ನು ಶೂನ್ಯಕ್ಕೆ ಪೆವಿಲಿಯನ್ಗಟ್ಟಿದ್ದಾರೆ. 5 ಓವರ್‌ಗಳ ಆಟ ಮುಗಿದಿದೆ. ಬಾಂಗ್ಲಾದೇಶ 2 ವಿಕೆಟ್ ನಷ್ಟಕ್ಕೆ 22 ರನ್ ಗಳಿಸಿದೆ.
ಟೀಂ ಇಂಡಿಯಾ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.
ಬಾಂಗ್ಲಾ ತಂಡ
ತಂಝಿದ್ ಹಸನ್, ಸೌಮ್ಯ ಸರ್ಕಾರ್, ನಜ್ಮುಲ್ ಹೊಸೈನ್ ಶಾಂಟೋ (ನಾಯಕ), ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ಜೇಕರ್ ಅಲಿ, ರಿಶಾದ್ ಹೊಸೈನ್, ತಂಝಿಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್.
ನಿಮ್ಮ ಪ್ರತಿಕ್ರಿಯೆ ಏನು?






