IPLಗೆ ಕೌಂಟ್ ಡೌನ್: ಆರಂಭ ಪಂದ್ಯದಲ್ಲೇ ಮುಂಬೈಗೆ ಆಘಾತ! ಹಾರ್ದಿಕ್ ಸ್ಥಾನ ತುಂಬೋರ್ಯಾರು?

ಮಾರ್ಚ್ 14, 2025 - 09:01
 0  22
IPLಗೆ ಕೌಂಟ್ ಡೌನ್: ಆರಂಭ ಪಂದ್ಯದಲ್ಲೇ ಮುಂಬೈಗೆ ಆಘಾತ! ಹಾರ್ದಿಕ್ ಸ್ಥಾನ ತುಂಬೋರ್ಯಾರು?

IPL ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಕೆಲವೇ  ದಿನದಲ್ಲಿ ಟೂರ್ನಿ ಶುರುವಾಗಲಿದೆ. ಆದರೆ ಮುಂಬೈ ಪಂದ್ಯಕ್ಕೆ ಶಾಕ್ ಎದುರಾಗಿದ್ದು, ತಾವು ಆಡುವ ಮೊದಲ ಪಂದ್ಯಕ್ಕೆ ಕ್ಯಾಪ್ಟನ್ ರೋಹಿತ್ ಶರ್ಮಾ ಅಲಭ್ಯರಿರಲಿದ್ದಾರೆ, 

ಮಾರ್ಚ್ 22 ರಿಂದ ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 23 ರಂದು ಜರುಗಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕಣಕ್ಕಿಳಿಯಲಿದೆ.

ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಡೆಯನ್ನು ಮುನ್ನಡೆಸುವವರು ಯಾರು ಎಂಬುದೇ ಪ್ರಶ್ನೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಿಂದ ನಿಷೇಧಕ್ಕೆ ಒಳಗಾಗಿದ್ದಾರೆ.

ಕಳೆದ ಸೀಸನ್​​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿದೆ.

ಈ ಒಂದು ಪಂದ್ಯದ ನಿಷೇಧದ ಶಿಕ್ಷೆ ಈ ಬಾರಿಯ ಐಪಿಎಲ್​​ನಲ್ಲಿ ಮುಂದುವರೆಯಲಿದೆ. ಅದರಂತೆ ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ಆಡುವ ಮೊದಲ ಪಂದ್ಯದಿಂದ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿಯಬೇಕಾಗುತ್ತದೆ. ಹೀಗಾಗಿ ಮಾರ್ಚ್ 23 ರಂದು ನಡೆಯಲಿರುವ ಸಿಎಸ್​ಕೆ ವಿರುದ್ಧದ ಮ್ಯಾಚ್​​ನಲ್ಲಿ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ.

ಇತ್ತ ಹಾರ್ದಿಕ್ ಪಾಂಡ್ಯ ಹೊರಗುಳಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಅತ್ತ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಇದ್ದು, ಇವರಿಬ್ಬರಲ್ಲಿ ಯಾರಿಗೆ ಕ್ಯಾಪ್ಟನ್ ಪಟ್ಟ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow