IPL 2024: ಇಂದು ಆರ್ಸಿಬಿ vs ಜಿಟಿ ಹೈವೋಲ್ಟೇಜ್ ಪಂದ್ಯ: ತವರಿನಲ್ಲಿ ಗೆಲ್ಲುತ್ತಾ ಬೆಂಗಳೂರು ಪಡೆ..?

ಆರ್ಸಿಬಿ, ಮೊದಲ ಪಂದ್ಯವನ್ನು ಕೆಕೆಆರ್ ವಿರುದ್ಧ ಅದರ ತವರು ನೆಲವಾದ ಕೋಲ್ಕತ್ತಾದಲ್ಲಿ ಆಡಿತ್ತು. ಆ ಬಳಿಕ ತನ್ನ ಎರಡನೇ ಪಂದ್ಯವನ್ನು ಸಿಎಸ್ಕೆ ವಿರುದ್ಧ ಅದರ ತವರು ನೆಲವಾದ ಚೆನ್ನೈನಲ್ಲಿ ಆಡಿತ್ತು. ಇದೀಗ ತನ್ನ ಮೂರನೇ ಪಂದ್ಯಕ್ಕೆ ಸಜ್ಜಾಗಿರುವ ಆರ್ಸಿಬಿ ತನ್ನ ತವರು ನೆಲವಾದ ಬೆಂಗಳೂರಿನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ.
ಆರ್ಸಿಬಿ ಹಾಗೂ ಗುಜರಾತ್ ನಡುವಿನ ಐಪಿಎಲ್ ಪಂದ್ಯ ಇಂದು ನಡೆಯಲಿದೆ. ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ. ಟಾಸ್ 7 ಗಂಟೆಗೆ ನಡೆಯಲಿದೆ.
ತವರಿನ ಪಂದ್ಯದಲ್ಲೂ ಗೆಲ್ಲುವ ಗುರಿ ಹೊಂದಿರುವ ಬೆಂಗಳೂರು ಪಡೆ, ಗುಜರಾತ್ ಟೈಟಾನ್ಸ್ ವಿರುದ್ಧ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲಿದೆ. ಅಲ್ಲದೆ ಆರಂಭಿಕ ಎರಡೂ ಪಂದ್ಯಗಳಿಂದ ಹೊರಗುಳಿದಿದ್ದ ಸ್ಫೋಟಕ ಹಿಟ್ಟರ್ ನಾಳೆಯ ಪಂದ್ಯಕ್ಕೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಹೌದು ಆರ್ಸಿಬಿ ತಂಡದಲ್ಲಿರು ಯುವ ಬ್ಯಾಟಿಂಗ್ ಆಲ್ರೌಂಡರ್ ಜೇಕಬ್ ಬೆಥೆಲ್ ನಾಳೆ ಕಣಕ್ಕಿಳಿಯುವ ಸಾಧ್ಯತೆ ಇದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಜೋಶ್ ಹ್ಯಾಜಲ್‌ವುಡ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ರಸಿಕ್ ಸಲಾಂ, ಸುಯಾಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಮನೋಜ್ ಭಾಂಡಗೆ, ಜಾಕೋಬ್ ಬೆಥೆಲ್, ದೇವದತ್ ಪಡಿಕಲ್, ಸ್ವಸ್ತಿಕ್ ಚಿಖರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.
ಗುಜರಾತ್ ಟೈಟನ್ಸ್: ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಗ್ಲೆನ್ ಫಿಲಿಪ್ಸ್, ಶಾರುಖ್ ಖಾನ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಆರ್ ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಜಯಂತ್ ಯಾದವ್, ಮಹಿಪಾಲ್ ಲೊಮ್ರೋರ್, ಕರೀಂ ಜನತ್, ಕುಲ್ವಂತ್ ಖೆಜ್ರೋಲಿಯಾ, ಅನುಜ್ ರಾವತ್, ಜೆರಾಲ್ಡ್ ಕೋಟ್ಜಿ, ಶೆರ್ಫಾನೆ ರುದರ್‌ಫೋರ್ಡ್, ಮಾನವ್ ಸುತಾರ್, ಕುಮಾರ್ ಕುಶಾಗ್ರಾ, ಅರ್ಷದ್ ಖಾನ್, ಗುರ್ನೂರ್ ಬ್ರಾರ್, ನಿಶಾಂತ್ ಸಿಂಧು.
ನಿಮ್ಮ ಪ್ರತಿಕ್ರಿಯೆ ಏನು?






