IPL 2024: ರಾಯುಡು ಪ್ರಕಾರ ಈ ನಾಲ್ಕು ತಂಡಗಳು ಪ್ಲೇ ಆಫ್ ಆಡಲಿದ್ಯಂತೆ!

2025 ಸೀಸನ್ 18ರ ಐಪಿಎಲ್ ಮುಕ್ತಾಯಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಪ್ರತಿ ತಂಡಗಳು 10 ಪಂದ್ಯ ಆಡಿ ಪ್ಲೇ ಆಫ್ ಲೆಕ್ಕಾಚಾರ ಆಕುತ್ತಿವೆ.
ಇದೀಗ ಸಿಎಸ್ಕೆ ತಂಡವನ್ನು ಹೊರತುಪಡಿಸಿ ಉಳಿದೆಲ್ಲಾ ತಂಡಗಳು ಪ್ಲೇಆಫ್ ರೇಸ್ನಲ್ಲಿದೆ. ಹೀಗೆ ಪ್ಲೇಆಫ್ ರೇಸ್ನಲ್ಲಿರುವ ತಂಡಗಳ ನಡುವೆ ಯಾವ ಟೀಮ್ಗಳು ಮುಂದಿನ ಸುತ್ತಿಗೆ ಪ್ರವೇಶಿಸಲಿದೆ ಎಂದು ಸಿಎಸ್ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಭವಿಷ್ಯ ನುಡಿದಿದ್ದಾರೆ
ಗುಜರಾತ್ ಟೈಟಾನ್ಸ್: ಅಂಬಾಟಿ ರಾಯುಡು ಅವರ ಪ್ರಕಾರ, ಈ ಬಾರಿ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್ಗೆ ಪ್ರವೇಶಿಸುವುದು ಖಚಿತ. ಆಡಿರುವ 9 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿರುವ ಶುಭ್ಮನ್ ಗಿಲ್ ನೇತೃತ್ವದ ಜಿಟಿ ಪಡೆ ಮುಂದಿನ ಪಂದ್ಯಗಳ ಮೂಲಕ ಪ್ಲೇಆಫ್ ಹಂತಕ್ಕೇರಲಿದೆ ಎಂದು ರಾಯುಡು ಹೇಳಿದ್ದಾರೆ.
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದ ಪಂಜಾಬ್ ಕಿಂಗ್ಸ್ ತಂಡ ಕೂಡ ಮುಂದಿನ ಹಂತಕ್ಕೇರಲಿದೆ.
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಆರಂಭದಲ್ಲಿ ವಿಫಲರಾದರೂ, ಆ ಬಳಿಕ ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದೀಗ 10 ಪಂದ್ಯಗಳಿಂದ 12 ಅಂಕ ಪಡೆದಿರುವ ಮಂಬೈ ಇಂಡಿಯನ್ಸ್ ಕೂಡ ಮುಂದಿನ ಪಂದ್ಯಗಳ ಮೂಲಕ ಪ್ಲೇಆಫ್ ಹಂತಕ್ಕೇರಲಿದೆ ಎಂದು ರಾಯುಡು ಹೇಳಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ ತಂಡವು ಈ ಬಾರಿಯ ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಈಗಾಗಲೇ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ರಾಯಲ್ ಪಡೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಈ ಬಾರಿಯ ಪ್ಲೇಆಫ್ನಲ್ಲಿ ಆರ್ಸಿಬಿ ತಂಡ ಕೂಡ ಕಾಣಿಸಿಕೊಳ್ಳುವುದು ಖಚಿತ ಎಂದಿದ್ದಾರೆ ಅಂಬಾಟಿ ರಾಯುಡು
ನಿಮ್ಮ ಪ್ರತಿಕ್ರಿಯೆ ಏನು?






