IPL 2025; ಕಪ್, ಕ್ಯಾಪ್ ಎಲ್ಲವೂ ನಮ್ಮದೇ! ಆರ್ ಸಿಬಿಯದ್ದೇ ಮೇಲುಗೈ!

ಎಪ್ರಿಲ್ 29, 2025 - 09:01
 0  15
IPL 2025; ಕಪ್, ಕ್ಯಾಪ್ ಎಲ್ಲವೂ ನಮ್ಮದೇ! ಆರ್ ಸಿಬಿಯದ್ದೇ ಮೇಲುಗೈ!

2025ರ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಆಡಿರುವ 10 ಪಂದ್ಯದಲ್ಲಿ 7 ಪಂದ್ಯವನ್ನು ಗೆದ್ದಿರುವ ಆರ್ ಸಿಬಿ ಮೂರರಲ್ಲಿ ಸೋಲು ಕಂಡಿದೆ. 

 ಇನ್ನೂ ಆಟಗಾರರ ಪ್ರದರ್ಶನ ನೋಡಿದ್ರೆ ಈ ಸಲ ಕಪ್ ನಮ್ಮದೇ ಎನ್ನುತ್ತಿದ್ದಾರೆ ಫ್ಯಾನ್ಸ್. ಈವರೆಗೆ ಆಡಿದ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಆ್ಯರೆಂಜ್ ಕ್ಯಾಪ್ ಹಾಗೂ ಪರ್ಪಲ್​ ಕ್ಯಾಪ್ ಪಟ್ಟಿಯಲ್ಲೂ ಆರ್​ಸಿಬಿ ಆಟಗಾರರು ಅಗ್ರಸ್ಥಾನದಲ್ಲಿದ್ದಾರೆ.

ಆರೆಂಜ್​​ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 51 ರನ್​ ಬಾರಿಸುವುದೊಂದಿಗೆ ಕೊಹ್ಲಿ ಎಲ್ಲರನ್ನು ಹಿಂದಿಕ್ಕಿದ್ದಾರೆ. ಈವರೆಗೆ 10 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 6 ಅರ್ಧಶತಕಗಳೊಂದಿಗೆ ಒಟ್ಟು 443 ರನ್ ಕಲೆಹಾಕಿದ್ದಾರೆ. 

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್. ಈವರೆಗೆ 10 ಇನಿಂಗ್ಸ್ ಆಡಿರುವ ಸೂರ್ಯ 3 ಅರ್ಧಶತಕಗಳೊಂದಿಗೆ 427 ರನ್​ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್​ ರೇಸ್​ನಲ್ಲಿ ವಿರಾಟ್ ಕೊಹ್ಲಿಗೆ ಉತ್ತಮ ಪೈಪೋಟಿ ನೀಡುತ್ತಿದ್ದಾರೆ.

ಪರ್ಪಲ್​ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ತಂಡದ ವೇಗಿ ಜೋಶ್ ಹ್ಯಾಝಲ್​ವುಡ್ ಮೊದಲ ಸ್ಥಾನದಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಇನಿಂಗ್ಸ್​ಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಹ್ಯಾಝಲ್​ವುಡ್ 18 ವಿಕೆಟ್​ಗಳನ್ನು ಕಬಳಿಸಿ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow