IPL 2025: 14 ವರ್ಷದ ಬಾಲಕನ ಆರ್ಭಟಕ್ಕೆ ಗುಜರಾತ್ ತತ್ತರ: ಕೇವಲ 17 ಬಾಲ್ʼನಲ್ಲಿ ಅರ್ಧಶತಕ ಬಾರಿಸಿದ ವೈಭವ್

ಎಪ್ರಿಲ್ 29, 2025 - 10:53
 0  19
IPL 2025: 14 ವರ್ಷದ ಬಾಲಕನ ಆರ್ಭಟಕ್ಕೆ ಗುಜರಾತ್ ತತ್ತರ: ಕೇವಲ 17 ಬಾಲ್ʼನಲ್ಲಿ ಅರ್ಧಶತಕ ಬಾರಿಸಿದ ವೈಭವ್

 

ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 209 ರನ್ಗಳ ಬೃಹತ್ ಸ್ಕೋರ್ ಕಲೆಹಾಕಿತು. ಗುರಿ ಬೆನ್ನಟ್ಟಿದ ರಾಜಸ್ಥಾನ್ ಕೇವಲ 2 ವಿಕೆಟ್ ಕಳೆದುಕೊಂಡು 15.5 ಓವರ್ಗಳಲ್ಲಿ ಗೆಲುವಿನ ನಗೆ ಬೀರಿತು.

ರಾಜಸ್ಥಾನ್ ಪರ ಸಿಡಿಲಬ್ಬರದ ಶತಕ ಸಿಡಿಸಿದ 14 ವರ್ಷದ ವೈಭವ್ ಸೂರ್ಯವಂಶಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದು ಮಾತ್ರವಲ್ಲದೆ ಐಪಿಎಲ್ ಇತಿಹಾಸದಲ್ಲಿ ಎರಡನೇ ವೇಗದ ಶತಕ ಸಿಡಿಸಿದ ಹಾಗೂ ಐಪಿಎಲ್ ಇತಿಹಾಸದಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಶತಕದೊಂದಿಗೆ ಐಪಿಎಲ್ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಐಪಿಎಲ್ನಲ್ಲಿ  ಅತೀ ವೇಗವಾಗಿ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರ ಜೊತೆಗೆ ಟಿ20 ಕ್ರಿಕೆಟ್ನಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ದಾಖಲೆ ವಿಜಯ್ ಝೋಲ್ ಹೆಸರಿನಲ್ಲಿತ್ತು. 2013 ರಲ್ಲಿ ನಡೆದ ಮುಂಬೈ ವಿರುದ್ಧದ ಟಿ20 ಪಂದ್ಯದಲ್ಲಿ ಮಹಾರಾಷ್ಟ್ರ ಪರ ಕಣಕ್ಕಿಳಿದಿದ್ದ 18 ವರ್ಷದ ಝೋಲ್ ಭರ್ಜರಿ ಸೆಂಚುರಿ ಸಿಡಿಸಿ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಇದೀಗ ದಾಖಲೆಯನ್ನು ಅಳಿಸಿ ಹಾಕುವಲ್ಲಿ ವೈಭವ್ ಯಶಸ್ವಿಯಾಗಿದ್ದಾರೆ.

ಮೂಲಕ 14ನೇ ವಯಸ್ಸಿನಲ್ಲಿ ಸೆಂಚುರಿ ಸಿಡಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಹಾಗೂ 15 ವಯಸ್ಸಿನೊಳಗೆ 20 ಸೆಂಚುರಿ ಬಾರಿಸಿದ ವಿಶ್ವದ ಏಕೈಕ ಬ್ಯಾಟ್ಸ್ಮನ್ ಎಂಬ ವಿಶ್ವ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಐಪಿಎಲ್ನಲ್ಲಿ ಕ್ರಿಸ್ ಗೇಲ್ (30 ಎಸೆತಗಳು) ಬಳಿಕ ಅತೀ ವೇಗದ ಶತಕ ಸಿಡಿಸಿದ ದಾಖಲೆ ಕೂಡ ವೈಭವ್ ಸೂರ್ಯವಂಶಿ ಪಾಲಾಗಿದೆ. ಇದಕ್ಕೂ ಮುನ್ನ ದಾಖಲೆ ಯೂಸುಫ್ ಪಠಾಣ್ ಹೆಸರಿನಲ್ಲಿತ್ತು. 2010 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದ ಪಠಾಣ್ 37 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದೀಗ ದಾಖಲೆಯನ್ನು ಮುರಿದು ವೈಭವ್ ಸೂರ್ಯವಂಶಿ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow