IPL 2025: 17 ವರ್ಷಗಳ ನಂತರ ಚೆನ್ನೈನಲ್ಲಿ ಗೆದ್ದ RCB..!

ಇಂಡಿಯನ್ ಪ್ರೀಮಿಯರ್ ಲೀಗ್ 18ನೇ ಸೀಸನ್ನಲ್ಲಿ ಆರ್ಸಿಬಿ ಟೀಮ್ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಸೀಸನ್ನ ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ 7 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿದ್ದ ಆರ್ಸಿಬಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲಲೇಬೇಕು ಎಂದು ಮುಂದಾಗಿತ್ತು.. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಜಯ ಗಳಿಸಿದೇ..ಆರ್ಸಿಬಿ ನೀಡಿದ 197 ರನ್ಗಳ ಗುರಿ ಬೆನ್ನಟ್ಟಿದ ಸಿಎಸ್ಕೆ, ಆರ್ಸಿಬಿಯ ಉತ್ತಮ ಬೌಲಿಂಗ್ ದಾಳಿಯ ಮುಂದೆ ಹೀನಾಯವಾಗಿ ಸೋಲುಂಡಿತು.
ಚೇಪಕ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆd ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಿತ್ತು..
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 197 ರನ್ ಕಲೆಹಾಕಿದರೆ, ಈ ಗುರಿ ಬೆನ್ನಟ್ಟಿದ ಸಿಎಸ್ಕೆ, ಆರ್ಸಿಬಿಯ ಕರಾರುವಕ್ಕಾದ ದಾಳಿಯ ಮುಂದೆ ಹೀನಾಯವಾಗಿ ಶರಣಾಯಿತು. ಈ ಗೆಲುವಿನೊಂದಿಗೆ ಆರ್ಸಿಬಿ ಪಾಯಿಂಟ್ ಪಟ್ಟಿಯಲ್ಲೂ ತನ್ನ ಪಾರುಪತ್ಯವನ್ನು ಮುಂದುವರೆಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






