IPL 2025 GT vs DC: ಗೆಲುವಿನ ಖುಷಿಯಲ್ಲಿದ್ದ ಶುಭಮನ್ ಗಿಲ್’ಗೆ ಬಿಗ್ ಶಾಕ್..! ₹ 12 ಲಕ್ಷ ದಂಡ

ಎಪ್ರಿಲ್ 21, 2025 - 09:02
 0  24
IPL 2025 GT vs DC: ಗೆಲುವಿನ ಖುಷಿಯಲ್ಲಿದ್ದ ಶುಭಮನ್ ಗಿಲ್’ಗೆ ಬಿಗ್ ಶಾಕ್..! ₹ 12 ಲಕ್ಷ ದಂಡ

ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 35ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು.

ಇನ್ನೂ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಗುಜರಾತ್ ಟೈಟಾನ್ಸ್ (GT) ತಂಡದ ನಾಯಕ ಶುಭ್​​ಮನ್ ಗಿಲ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕನಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಅದರಂತೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​​ಮನ್ ಗಿಲ್​ಗೆ 12 ಲಕ್ಷ ರೂ. ಫೈನ್ ವಿಧಿಸಲಾಗಿದೆ. ಇದರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ದಂಡದ ಶಿಕ್ಷೆಗೆ ಗುರಿಯಾದ 7ನೇ ನಾಯಕ ಎನಿಸಿಕೊಂಡಿದ್ದಾರೆ. 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow