IPL 2025 GT vs DC: ಗೆಲುವಿನ ಖುಷಿಯಲ್ಲಿದ್ದ ಶುಭಮನ್ ಗಿಲ್’ಗೆ ಬಿಗ್ ಶಾಕ್..! ₹ 12 ಲಕ್ಷ ದಂಡ

ಎಪ್ರಿಲ್ 21, 2025 - 09:02
 0  10
IPL 2025 GT vs DC: ಗೆಲುವಿನ ಖುಷಿಯಲ್ಲಿದ್ದ ಶುಭಮನ್ ಗಿಲ್’ಗೆ ಬಿಗ್ ಶಾಕ್..! ₹ 12 ಲಕ್ಷ ದಂಡ

ಅಹದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 35ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು.

ಇನ್ನೂ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಗುಜರಾತ್ ಟೈಟಾನ್ಸ್ (GT) ತಂಡದ ನಾಯಕ ಶುಭ್​​ಮನ್ ಗಿಲ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕನಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಅದರಂತೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​​ಮನ್ ಗಿಲ್ಗೆ 12 ಲಕ್ಷ ರೂ. ಫೈನ್ ವಿಧಿಸಲಾಗಿದೆ. ಇದರೊಂದಿಗೆ ಬಾರಿಯ ಐಪಿಎಲ್ನಲ್ಲಿ ದಂಡದ ಶಿಕ್ಷೆಗೆ ಗುರಿಯಾದ 7ನೇ ನಾಯಕ ಎನಿಸಿಕೊಂಡಿದ್ದಾರೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow