IPL 2025: IPL ನಿಂದ 2 ವರ್ಷ ಬ್ಯಾನ್ ಆದ ವಿದೇಶಿ ಆಟಗಾರ!

ವಿದೇಶಿ ಆಟಗಾರರೊಬ್ಬರು IPL ನಿಂದ 2 ವರ್ಷ ಬ್ಯಾನ್ ಆಗಿದ್ದಾರೆ.
IPLಗೆ ಆಯ್ಕೆಯಾದ ಆಟಗಾರರು ಟೂರ್ನಿ ಆಡುವುದು ಕಡ್ಡಾಯ. ಅಂದರೆ ಯಾವುದೇ ನಿರ್ದಿಷ್ಟ ಕಾರಣಗಳಿಲ್ಲದೆ ಐಪಿಎಲ್ನಿಂದ ಹಿಂದೆ ಸರಿಯುವಂತಿಲ್ಲ. ಒಂದು ವೇಳೆ ವಿನಾಕಾರಣ ಟೂರ್ನಿಗೆ ಅಲಭ್ಯರಾದರೆ ಅವರ ಮೇಲೆ 2 ವರ್ಷಗಳ ನಿಷೇಧ ಹೇರಲಾಗುತ್ತದೆ. ಅದರಂತೆ ಇದೀಗ ಹ್ಯಾರಿ ಬ್ರೂಕ್ ಬ್ಯಾನ್ಗೆ ಒಳಗಾಗಿದ್ದಾರೆ.
ಅಂತರರಾಷ್ಟ್ರೀಯ ಕ್ರಿಕೆಟ್ಗಾಗಿ ಹೆಚ್ಚಿನ ಸಿದ್ಧತೆ ಮಾಡಿಕೊಳ್ಳುವ ಸಲುವಾಗಿ ಬ್ರೂಕ್ ಈ ಬಾರಿಯ ಐಪಿಎಲ್ಗೆ ಅಲಭ್ಯರಾಗುವುದಾಗಿ ತಿಳಿಸಿದ್ದಾರೆ. ಹ್ಯಾರಿ ಬ್ರೂಕ್ ಅವರ ಈ ನಿರ್ಧಾರವೇ ಇದೀಗ ಅವರಿಗೆ ಮುಳುವಾಗಲಿದೆ. ಏಕೆಂದರೆ ಇಂಡಿಯನ್ ಪ್ರೀಮಿಯರ್ ಲೀಗ್ನ ಹೊಸ ನಿಯಮದ ಪ್ರಕಾರ, ಐಪಿಎಲ್ ಮೆಗಾ ಹರಾಜಿನ ಮೂಲಕ ಆಯ್ಕೆಯಾದ ಆಟಗಾರರು ಟೂರ್ನಿಯಿಂದ ಹಿಂದೆ ಸರಿದರೆ ಅಂತಹ ಆಟಗಾರರ ಮೇಲೆ 2 ವರ್ಷಗಳ ನಿಷೇಧ ಹೇರಲಾಗುತ್ತದೆ.
ಇಂತಹದೊಂದು ನಿಯಮ ಜಾರಿಗೊಳಿಸಲು ಮುಖ್ಯ ಕಾರಣ, ಕೆಲ ಆಟಗಾರರು ಆಯ್ಕೆಯಾದರೂ ಐಪಿಎಲ್ ಆರಂಭದ ವೇಳೆ ಹಿಂದೆ ಸರಿಯುತ್ತಿರುವುದು. ವಿದೇಶಿ ಆಟಗಾರರ ಇಂತಹ ನಡೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಸಿಸಿಐ ಹೊಸ ನಿಯಮವನ್ನು ಪರಿಚಯಿಸಿದೆ.
ಅದರಂತೆ ಈ ಬಾರಿಯ ಐಪಿಎಲ್ನ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಹ್ಯಾರಿ ಬ್ರೂಕ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬರೋಬ್ಬರಿ 6.25 ಕೋಟಿ ರೂ.ಗೆ ಖದೀಸಿತ್ತು. ಇದೀಗ ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಬ್ರೂಕ್ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






