IPL 2025: IPL ಮೆಗಾ ಹರಾಜಿಗೂ ಮುನ್ನ ಮಹತ್ವದ ಬದಲಾವಣೆಗೆ ಮುಂದಾದ BCCI!

ಭಾರತದ ಕ್ರಿಕೆಟ್ ಹಬ್ಬ, ಐಪಿಎಲ್ ಮೆಗಾ ಹರಾಜಿಗೆ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ನವೆಂಬರ್ 2024 ರಲ್ಲಿ ಐಪಿಎಲ್ 2025 ರ ಹರಾಜು ನಡೆಯಲಿದೆ. ಇದೀಗ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜು ಪ್ರಕ್ರಿಯೆ ನವೆಂಬರ್ 24, 25ರಂದು ನಡೆಯಲಿದೆ ಎಂದು ವರದಿಯಾಗಿದೆ.
ಇನ್ನೂ IPL ಮೆಗಾ ಹರಾಜಿನ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲ BCCi ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಆಟಗಾರರ ಕನಿಷ್ಠ ಬಿಡ್ಡಿಂಗ್ ಬೆಲೆ 30 ಲಕ್ಷ ರೂ. ಇರಲಿದೆ. ಇದಕ್ಕೂ ಮುನ್ನ ಕನಿಷ್ಠ ಹರಾಜು ಮೊತ್ತ 20 ಲಕ್ಷ ರೂ. ಆಗಿತ್ತು. ಆದರೆ ಈ ಬಾರಿ ಈ ಮೊತ್ತವನ್ನು 30 ಲಕ್ಷ ರೂ.ಗೆ ಏರಿಸಲಾಗಿದೆ.
ಅಂದರೆ ಇಲ್ಲಿ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಆಟಗಾರರ ಕನಿಷ್ಠ ಮೂಲ ಬೆಲೆ 30 ಲಕ್ಷ ರೂ. ಆಗಿರಲಿದೆ. ಹಾಗೆಯೇ 50 ಲಕ್ಷ ರೂ., 1 ಕೋಟಿ ರೂ. ಹಾಗೂ 1.5 ಕೋಟಿ ರೂ. ಮೂಲ ಬೆಲೆಯಲ್ಲಿ ಆಟಗಾರರು ಹರಾಜಿನಲ್ಲಿ ಕಾಣಿಸಿಕೊಳ್ಳಬಹುದು. ಹಾಗೆಯೇ ಇಲ್ಲಿ ಗರಿಷ್ಠ ಮೂಲ ಬೆಲೆ 2 ಕೋಟಿ ರೂ. ನಿಗದಿ ಮಾಡಲಾಗಿದೆ..
ಅದರಂತೆ ಈ ಬಾರಿಯ ಹರಾಜಿನಲ್ಲಿ ಕನಿಷ್ಠ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡ ಆಟಗಾರರನ್ನು ಖರೀದಿಸಲು 30 ಲಕ್ಷ ರೂ. ವ್ಯಯಿಸಬೇಕಾಗುತ್ತದೆ. ಈ ಮೂಲಕ ಹೊಸ ಆಟಗಾರರಿಗೆ ಹೆಚ್ಚಿನ ಮೊತ್ತ ಸಿಗುವಂತೆ ಮಾಡಲು ಬಿಸಿಸಿಐ ಮುಂದಾಗಿದೆ.
ಇನ್ನು ಈ ಬಾರಿಯ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯುವ ಸಾಧ್ಯತೆಯಿದೆ. ಪ್ರಸ್ತುತ ಮಾಹಿತಿ ಪ್ರಕಾರ, 18ನೇ ಸೀಸನ್ನ ಮೆಗಾ ಆಕ್ಷನ್ಗೆ ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ಆತಿಥ್ಯವಹಿಸಲಿದೆ. ಅಂದರೆ ಅರಬ್ಬರ ನಾಡಿನಲ್ಲಿ ಆಟಗಾರರ ಐಪಿಎಲ್ ಭವಿಷ್ಯ ನಿರ್ಧಾರವಾಗಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






