IPL 2025: LSG vs GT ಮುಖಾಮುಖಿ: ಟಾಸ್ ಗೆದ್ದ ಲಕ್ನೋ ಬೌಲಿಂಗ್ ಆಯ್ಕೆ.!

ಲಖನೌ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಫಾರ್ಮ್ ನಲ್ಲಿರುವ ಲಖನೌ ಸೂಪರ್ ಜಯಂಟ್ಸ್ ಬ್ಯಾಟರ್ ನಿಕೋಲಸ್ ಪೂರನ್‌ಗೆ ಗುಜರಾತ್‌ನ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಎದುರಿಸುತ್ತಿದ್ದಾರೆ. ಐಪಿಎಲ್ 2025 ರ 26 ನೇ ಪಂದ್ಯವು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳ ನಡುವೆ ಏಕಾನಾ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಎರಡೂ ತಂಡಗಳು ಪ್ರಸ್ತುತ ಉತ್ತಮ ಫಾರ್ಮ್‌ನಲ್ಲಿರುವ ಕಾರಣ ಈ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ. ಗುಜರಾತ್ ಟೈಟಾನ್ಸ್ ಪ್ರಸ್ತುತ 4 ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ತಂಡವು 3 ಗೆಲುವುಗಳೊಂದಿಗೆ ಆರನೇ ಸ್ಥಾನದಲ್ಲಿದೆ. ಟಾಸ್ ಗೆದ್ದ ಲಕ್ನೋ ನಾಯಕ ರಿಷಬ್ ಪಂತ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಗುಜರಾತ್ ಇನ್ನಿಂಗ್ಸ್ ಆರಂಭವಾಗಿದೆ. ಗುಜರಾತ್ ಪರ ಸಾಯಿ ಸುದರ್ಶನ್ ಅವರೊಂದಿಗೆ ಕ್ಯಾಪ್ಟನ್ ಶುಭಮನ್ ಗಿಲ್ ಕಣಕ್ಕಿಳಿದಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ XI
ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ರಿಷಬ್ ಪಂತ್, ಹಿಮ್ಮತ್ ಸಿಂಗ್, ಡೇವಿಡ್ ಮಿಲ್ಲರ್, ದಿಗ್ವೇಶ್ ಸಿಂಗ್, ಅಬ್ದುಲ್ ಸಮದ್, ಶಾರ್ದೂಲ್ ಠಾಕೂರ್, ಆಕಾಶ್ ದೀಪ್, ಅವೇಶ್ ಖಾನ್, ರವಿ ಬಿಷ್ಣೋಯ್.
ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ XI
ಶುಭಮನ್ ಗಿಲ್, ಸಾಯಿ ಸುದರ್ಶನ್, ಜೋಸ್ ಬಟ್ಲರ್, ವಾಷಿಂಗ್ಟನ್ ಸುಂದರ್, ಶೆರ್ಫಾನೆ ರುದರ್‌ಫೋರ್ಡ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಅರ್ಷದ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್.
ನಿಮ್ಮ ಪ್ರತಿಕ್ರಿಯೆ ಏನು?






