IPL 2025: ಇಂದು RCB vs LSG ಮುಖಾಮುಖಿ: ತಂಡದಲ್ಲಿ ಭಾರೀ ಬದಲಾವಣೆ – ಪ್ಲೇಯಿಂಗ್ 11 ಹೀಗಿದೆ ನೋಡಿ

ಮೇ 9, 2025 - 10:16
 0  29
IPL 2025: ಇಂದು RCB vs LSG ಮುಖಾಮುಖಿ: ತಂಡದಲ್ಲಿ ಭಾರೀ ಬದಲಾವಣೆ – ಪ್ಲೇಯಿಂಗ್ 11 ಹೀಗಿದೆ ನೋಡಿ

ಇಂಡಿಯನ್ ಪ್ರೀಮಿಯರ್ ಲೀಗ್​ 2025ರ 56 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ಗುಜರಾತ್ ಟೈಟಾನ್ಸ್ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಇನ್ನು ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕ್ರಮವಾಗಿ 3ನೇ ಮತ್ತು 4ನೇ ಸ್ಥಾನಗಳಲ್ಲಿದೆ.

ಇದರ ನಡುವೆ ಇಂದು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಪಂದ್ಯಕ್ಕಾಗಿ ಆರ್​ಸಿಬಿ ತಂಡವು 2 ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ದೇವದತ್ ಪಡಿಕ್ಕಲ್ ಗಾಯದ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಭಾರಿ ಪಡಿಕ್ಕಲ್ ಬದಲಿಗೆ ಮತ್ತೋರ್ವ ಆಟಗಾರನ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವುದು ಖಚಿತ.

ಇಲ್ಲಿ ಆರ್​ಸಿಬಿ ತಂಡದ ಆರಂಭಿಕರಾಗಿ ಜೇಕಬ್ ಬೆಥೆಲ್ ಹಾಗೂ ವಿರಾಟ್ ಕೊಹ್ಲಿ ಮುಂದುವರೆಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಮಯಾಂಕ್ ಅಗರ್ವಾಲ್​ಗೆ ಚಾನ್ಸ್ ನೀಡಬಹುದು.

ಇನ್ನು ಐದನೇ ಕ್ರಮಾಂಕದಲ್ಲಿ ಕೃನಾಲ್ ಪಾಂಡ್ಯ ಕಣಕ್ಕಿಳಿದರೆ, ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಕಾಣಿಸಿಕೊಳ್ಳಬಹುದು. ಇನ್ನುಳಿದಂತೆ 7ನೇ ಮತ್ತು 8ನೇ ಕ್ರಮಾಂಕಗಳಲ್ಲಿ ಟಿಮ್ ಡೇವಿಡ್ ಹಾಗೂ ರೊಮಾರಿಯೊ ಶೆಫರ್ಡ್ ಕಣಕ್ಕಿಳಿಯುವುದು ಖಚಿತ.

ಹಾಗೆಯೇ ಬೌಲರ್​ಗಳಾಗಿ ಭುವನೇಶ್ವರ್ ಕುಮಾರ್ ಹಾಗೂ ಯಶ್ ದಯಾಳ್ ಪ್ಲೇಯಿಂಗ್ ಇಲೆವೆನ್​ನಲ್ಲಿರಲಿದ್ದಾರೆ. ಇನ್ನು ಕಳೆದ ಪಂದ್ಯದ ವೇಳೆ ಭುಜದ ನೋವಿನ ಕಾರಣ ವಿಶ್ರಾಂತಿ ಪಡೆದಿದ್ದ ಜೋಶ್ ಹ್ಯಾಝಲ್​ವುಡ್ ಸಂಪೂರ್ಣ ಫಿಟ್​ನೆಸ್ ಸಾಧಿಸಿದ್ದರೆ, ಲುಂಗಿ ಎನ್​ಗಿಡಿ ಬದಲಿಗೆ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಇಂಪ್ಯಾಕ್ಟ್ ಸಬ್ ಆಗಿ ಸುಯಶ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ಮಯಾಂಕ್ ಅಗರ್ವಾಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಝಲ್‌ವುಡ್, ಯಶ್ ದಯಾಳ್, ಸುಯಶ್ ಶರ್ಮಾ, ಸ್ವಪ್ನಿಲ್ ಸಿಂಗ್, ರಾಸಿಖ್ ದರ್ ಸಲಾಮ್, ಜೇಕಬ್ ಬೆಥೆಲ್, ರೊಮಾರಿಯೊ ಶೆಫರ್ಡ್, ಲುಂಗಿ ಎನ್‌ಗಿಡಿ, ನುವಾನ್ ತುಷಾರ, ಮೋಹಿತ್ ರಾಠಿ, ಸ್ವಸ್ತಿಕ್ ಚಿಕಾರ, ಅಭಿನಂದನ್ ಸಿಂಗ್.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow