IPL 2025: ಇಂದು ಆರ್ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿ: RCB ಗೆಲುವಿಗಾಗಿ ಕಾದು ಕೂತಿದ್ದಾರೆ ಫ್ಯಾನ್ಸ್

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2025ರ 42ನೇ ಪಂದ್ಯದಲ್ಲಿ ಆರ್ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ತವರಿನಲ್ಲಿ ಆಡಿರುವ 3 ಪಂದ್ಯಗಳನ್ನು ಸೋತಿರುವ ಆರ್ಸಿಬಿಗೆ ನಾಳಿನ ಪಂದ್ಯ ಅತ್ಯಂತ ಮಹತ್ವದಾಗಿದೆ. ಇತ್ತ ರಾಜಸ್ಥಾನ್ ಕೂಡ ಕಳೆದ ಮುಖಾಮುಖಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಹಾಗೂ ಪ್ಲೇ ಆಫ್ ರೇಸ್ನಲ್ಲಿ ಜೀವಂತವಾಗಿರಲು ಹೋರಾಡಲಿದೆ. ಏಕೆಂದರೆ ರಾಜಸ್ಥಾನ್ ಆಡಿರುವ ಎಂಟು ಪಂದ್ಯಗಳಲ್ಲಿ ಕೇವಲ ಎರಡನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 10 ರಲ್ಲಿ ಎಂಟನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಆರ್ಸಿಬಿ ಆಡಿರುವ ಎಂಟು ಪಂದ್ಯಗಳಲ್ಲಿ ಕೇವಲ ಮೂರು ಪಂದ್ಯಗಳನ್ನು ಸೋತು 10 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ
ಉಭಯ ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್ಸ್ಟೋನ್, ಜೋಶ್ ಹೇಜಲ್ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ದೇವದತ್ತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರಾ, ಲುಂಗಿ ಎನ್ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಶಿಮ್ರೋನ್ ಹೆಟ್ಮೆಯರ್, ಸಂದೀಪ್ ಶರ್ಮಾ, ಜೋಫ್ರಾ ಆರ್ಚರ್, ವನಿಂದು ಹಸರಂಗ, ಮಹೇಶ್ ತೀಕ್ಷಣ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ, ತುಷಾರ್ ದೇಶಪಾಂಡೆ, ನಿತೀಶ್ ರಾಣಾ, ಫಜಲ್ಹಕ್ ಫಾರೂಕಿ, ಶುಭಂ ದುಬೆ, ಯುಧ್ವೀರ್ ಚರಕ್, ವೈಭವ್ ಸೂರ್ಯವಂಶಿ, ಕುನಾಲ್ ರಾಥೋಡ್, ಕ್ವೆನಾ ಮಫಕಾ, ಅಶೋಕ್ ಶರ್ಮಾ.
ನಿಮ್ಮ ಪ್ರತಿಕ್ರಿಯೆ ಏನು?






