IPL 2025: ಗುಜರಾತ್ ಟೈಟನ್ಸ್ ತಂಡಕ್ಕೆ ಸತತ ಎರಡನೇ ಸೋಲು: ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ..! ಯಾಕೆ ಗೊತ್ತಾ..?

ಮಾರ್ಚ್ 30, 2025 - 12:02
 0  47
IPL 2025: ಗುಜರಾತ್ ಟೈಟನ್ಸ್ ತಂಡಕ್ಕೆ ಸತತ ಎರಡನೇ ಸೋಲು: ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ..! ಯಾಕೆ ಗೊತ್ತಾ..?

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಗ್ಗರಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 196 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 160 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮುಂಬೈ ಪಡೆ 36 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಇದರ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ನೀಡಲಾಗಿದ್ದು, ಈ ತಪ್ಪನ್ನು ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ ಎಚ್ಚರಿಕೆ ನೀಡಲಾಗಿದೆ.

ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಪಂದ್ಯದ ವೇಳೆ ಬೌಂಡರಿ ಲೈನ್​ನಿಂದ ಒರ್ವ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಅದರಂತೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಹಾರ್ದಿಕ್ ಪಾಂಡ್ಯಗೆ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ, 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದೇ ತಪ್ಪನ್ನು ಮುಂದಿನ ಪಂದ್ಯಗಳಲ್ಲಿ ಪುನರಾವರ್ತಿಸಿದರೆ, ಹಾರ್ದಿಕ್ ಪಾಂಡ್ಯ 24 ಲಕ್ಷ ರೂ. ದಂಡ ಕಟ್ಟಬೇಕಾಗುತ್ತದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow