IPL 2025: ಟ್ರೋಫಿ ಗೆಲ್ಲಲು ಡೆಲ್ಲಿ ತಂಡ ಮಾಸ್ಟರ್ ಪ್ಲ್ಯಾನ್; ನೂತನ ಮುಖ್ಯಕೋಚ್ ಆಗಿ ಹೇಮಂಗ್ ಬದಾನಿ ನೇಮಕ!

IPL 2025: ಟ್ರೋಫಿ ಗೆಲ್ಲಲು ಡೆಲ್ಲಿ ತಂಡ ಮಾಸ್ಟರ್ ಪ್ಲ್ಯಾನ್; ನೂತನ ಮುಖ್ಯಕೋಚ್ ಆಗಿ ಹೇಮಂಗ್ ಬದಾನಿ ನೇಮಕ!
ಟ್ರೋಫಿ ಗೆಲ್ಲಲು ಮಾಸ್ಟರ್ ಪ್ಲ್ಯಾನ್ ಮಾಡಿರುವ ಡೆಲ್ಲಿ ತಂಡವು, ಹೇಮಂಗ್ ಬದಾನಿ ರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಐಪಿಎಲ್ ಟ್ರೋಫಿ ತಂದುಕೊಡುವಲ್ಲಿ ವಿಫಲರಾದ ರಿಕಿ ಪಾಟಿಂಗ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮುಖ್ಯ ಕೋಚ್ ಹುದ್ದೆಯಿಂದ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಮುಖ್ಯಕೋಚ್ ಹುದ್ದೆಗೆ ಸೌರವ್ ಗಂಗೂಲಿ ಅವರ ಹೆಸರು ಕೇಳಿಬಂದಿತ್ತು. ಆದ್ರೆ ಡೆಲ್ಲಿ ಕ್ಯಾಪಿಲಟ್ಸ್ ಫ್ರಾಂಚೈಸಿ ಅಚ್ಚರಿ ಎನ್ನುವಂತೆ ಹೇಮಂಗ್ ಬದಾನಿ ಅವರನ್ನು ಮುಖ್ಯಕೋಚ್ ಆಗಿ ನೇಮಕ ಮಾಡಿಕೊಂಡಿದೆ. ಅಲ್ಲದೇ ಸೌರವ್ ಗಂಗೂಲಿ ಅವರ ಬದಲಿಗೆ ಕ್ರಿಕೆಟ್ ನಿರ್ದೇಶಕರನ್ನಾಗಿ ವೇಣುಗೋಪಾಲ್ ರಾವ್ ಅವರನ್ನ ನೇಮಿಸಿಕೊಂಡಿದೆ.
47 ವರ್ಷವಯಸ್ಸಿನ ಹೇಮಂಗ್ ಬದಾನಿ ಟೀಂ ಇಂಡಿಯಾದಲ್ಲಿ 4 ಟೆಸ್ಟ್ ಹಾಗೂ 40 ಏಕದಿನ ಪಂದ್ಯಗಳನ್ನಾಡಿದ ಅನುಭವ ಹೊಂದಿದ್ದಾರೆ. ಅಲ್ಲದೇ 2021-23 ರವರೆಗೆ ಸನ್ರೈಸರ್ಸ್ ಹೈದರಾಬಾದ್ ತಂಡದ ಫೀಲ್ಡಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದಾರೆ.
SA20 ಲೀಗ್ನ ಉದ್ಘಾಟನಾ ಆವೃತ್ತಿಯಲ್ಲೇ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಪ್ರಶಸ್ತಿ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದರು. ಜೊತೆಗೆ ಈ ವರ್ಷದ ILT20 ನಲ್ಲಿ ದುಬೈ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿದ್ದರು. ಇವರ ನೇತೃತ್ವದಲ್ಲೇ ದುಬೈ ಕ್ಯಾಪಿಟಲ್ಸ್ ತಂಡ ಫೈನಲ್ ತಲುಪಿತ್ತು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯಕೋಚ್ ಆಗಿ ನೇಮಕಗೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






