IPL 2025: ಪಂಜಾಬ್ ಕಿಂಗ್ಸ್ ವಿರುದ್ಧ RCB ಭರ್ಜರಿ ಗೆಲುವು: ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಹೇಳಿದ್ದೇನು..?

ತವರು ಚಿನ್ನಸ್ವಾಮಿಯಲ್ಲಿ ಪಂಜಾಬ್ ಎದುರು ಮುಖಭಂಗ ಅನುಭವಿಸಿದ್ದ ಆರ್ಸಿಬಿ ನಿನ್ನೆ ಅವರದ್ದೇ ಹೋಮ್ಗ್ರೌಂಡ್ನಲ್ಲಿ ಪವರ್ಫುಲ್ ಪಂಚ್ ಕೊಟ್ಟಿದೆ. ಪಕ್ಕಾ ಪ್ಲಾನ್ ಮಾಡಿಕೊಂಡು ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್, ಪಂಜಾಬ್ ಕಿಂಗ್ಸ್ನ ಉಡಾಯಿಸಿದೆ.
ಈ ಗೆಲುವಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಗುರಿಯಾಗಿಸಿ ಸಂಭ್ರಮಿಸಿದ್ದರು. ಅತಿರೇಕಕ್ಕೆ ಕಾರಣವಾಗಿದ್ದ ಈ ಸಂಭ್ರಮಾಚರಣೆಯಿಂದ ಅಯ್ಯರ್ ಕೂಡ ಕೋಪಗೊಂಡಿದ್ದರು. ಇದಾಗ್ಯೂ ಪಂದ್ಯದ ಬಳಿಕ ಪಂಜಾಬ್ ಕಿಂಗ್ಸ್ ತಂಡದ ನಾಯಕ ಸಣ್ಣತನ ಮೆರೆದಿಲ್ಲ ಎಂಬುದು ವಿಶೇಷ.
ಈ ಸೋಲಿನ ಬಳಿಕ ಮಾತನಾಡಿದ ಶ್ರೇಯಸ್ ಅಯ್ಯರ್, ನಮ್ಮ ತಂಡದ ಹೆಚ್ಚಿನ ಬ್ಯಾಟ್ಸ್ಮನ್ಗಳು ಮೊದಲ ಎಸೆತದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡುತ್ತಿದ್ದಾರೆ. ಆದರೆ ನಾವು ಮೊದಲು ಬ್ಯಾಟ್ ಮಾಡುವಾಗ ವಿಕೆಟ್ ಅನ್ನು ನಿರ್ಣಯಿಸಲು ಕಷ್ಟಪಡುತ್ತಿದ್ದೇವೆ. ಹೀಗಾಗಿಯೇ ನಾವು ಪಡೆಯುತ್ತಿರುವ ಆರಂಭವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಉತ್ತಮ ಆರಂಭ ಪಡೆದರೂ ಆ ಬಳಿಕ ಸತತ ವಿಕೆಟ್ ಕಳೆದುಕೊಳ್ಳುತ್ತಿರುವುದರಿಂದ ಬೃಹತ್ ಮೊತ್ತಗಳಿಸಲು ಕಷ್ಟಪಡುತ್ತಿದ್ದೇವೆ. ಇದಾಗ್ಯೂ ಈ ಪಂದ್ಯದಲ್ಲೂ ಸಕಾರಾತ್ಮಕ ಅಂಶ ಎಂದರೆರೆ, ನಾವು ಉತ್ತಮ ಆರಂಭ ಪಡೆದಿದ್ದೇವೆ. ಬೌಲರ್ಗಳು ಕೂಡ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದರು.
ನಾವು ವಿಕೆಟ್ಗೆ ಹೊಂದಿಕೊಳ್ಳುವ ಬಗ್ಗೆ ಮಾತನಾಡುತ್ತಲೇ ಇರುತ್ತೇವೆ. ಚೆಂಡು ಹಳೆಯದಾದ ನಂತರ ಅದು ವಿಕೆಟ್ನಿಂದ (ಪಿಚ್) ದೂರ ಹೋಗುವುದಿಲ್ಲ. ಅವರಿಬ್ಬರೂ (ಓಪನರ್ಗಳು) ಉತ್ತಮ ಸ್ಟ್ರೋಕ್ಮೇಕರ್ಗಳು. ನೀವು ಅವರಿಗೆ ನಿಧಾನವಾಗಿ ಆಡಲು ಹೇಳಿದರೆ ಅದನ್ನು ಅರ್ಥಮಾಡಿಕೊಳ್ಳುವುದು ಅವರಿಗೆ ಕಷ್ಟ. ಹೀಗಾಗಿಯೇ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






