IPL 2025: ಮತ್ತೆ RCB ನಾಯಕರಾಗ್ತಾರಾ ವಿರಾಟ್ ಕೊಹ್ಲಿ?

ನವೆಂಬರ್ 4, 2024 - 09:38
 0  8
IPL 2025: ಮತ್ತೆ RCB ನಾಯಕರಾಗ್ತಾರಾ ವಿರಾಟ್ ಕೊಹ್ಲಿ?

ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ RCB ತಂಡವು ಇದುವರೆಗೂ ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನೂ ಗೆದ್ದಿಲ್ಲ. ಮೆಗಾ ಹರಾಜಿನ ಮುಂದೆ, ಪ್ರಮುಖ ಆಟಗಾರರನ್ನು ಉಳಿಸಿಕೊಳ್ಳುವ ಗುರಿಯನ್ನು ಫ್ರಾಂಚೈಸ್ ಹೊಂದಿದೆ, ಏಕೆಂದರೆ ಅವರು ತಪ್ಪಿಸಿಕೊಳ್ಳಲಾಗದ ಚೊಚ್ಚಲ ಪ್ರಶಸ್ತಿಗಾಗಿ ತಮ್ಮ ಬೆನ್ನಟ್ಟುವಿಕೆಯನ್ನು ಮುಂದುವರಿಸಿದ್ದಾರೆ. 

ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮತ್ತೆ ವಿರಾಟ್ ಕೊಹ್ಲಿ ನಾಯಕರಾಗುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಪ್ರತಿ ಬಾರಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸುವ ಆರ್​ಸಿಬಿ ಫೈನಲ್​ ಪ್ರವೇಶಿಸದೇ 8 ವರ್ಷಗಳೇ ಕಳೆದಿವೆ.

ಆರ್​ಸಿಬಿ ತಂಡದ ಪ್ರಸ್ತುತ ನಾಯಕ ಫಾಫ್ ಡುಪ್ಲೆಸಿಸ್​ಗೆ ಈಗ 40 ವರ್ಷ. ಹೀಗಾಗಿ ಆರ್​ಸಿಬಿ ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ. 

ಇತ್ತ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿದ್ದಂತೆ ಮತ್ತೆ ನಾಯಕತ್ವದ ಚರ್ಚೆಗಳು ಶುರುವಾಗಿತ್ತು. ಏಕೆಂದರೆ ಈ ಹಿಂದೆ ಟೀಮ್ ಇಂಡಿಯಾ ನಾಯಕತ್ವದ ಹೊರೆಯ ಕಾರಣ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದರು. ಅಂದರೆ ಭಾರತ ತಂಡವನ್ನು ಹಾಗೂ ಆರ್​ಸಿಬಿಯನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಲೀಗ್ ಕ್ರಿಕೆಟ್​ನ ನಾಯಕತ್ವನ ಜವಾಬ್ದಾರಿಯಿಂದ ಕೆಳಗಿಳಿಯುತ್ತಿರುವುದಾಗಿ ಕೊಹ್ಲಿ ತಿಳಿಸಿದ್ದರು.

ಇದೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೂ ವಿದಾಯ ಹೇಳಿದ್ದಾರೆ. ಅತ್ತ ಟಿ20 ಮಾದರಿಗೆ ನಿವೃತ್ತಿ ಘೋಷಿಸಿರುವ ಕಾರಣ, ವಿರಾಟ್ ಕೊಹ್ಲಿ ಆರ್​ಸಿಬಿ ಪರ ಸಂಪೂರ್ಣ ತೊಡಗಿಸಿಕೊಳ್ಳಬಹುದು.

ಹೀಗಾಗಿ ವಿರಾಟ್ ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಅದರಂತೆ ಐಪಿಎಲ್ 2025 ರಿಂದ ಕಿಂಗ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕ್ರಿಕ್​ಇನ್​ಫೋ ಮೂಲಗಳು ತಿಳಿಸಿವೆ.

ಈಗಾಗಲೇ ವಿರಾಟ್ ಕೊಹ್ಲಿ ಆರ್​ಸಿಬಿ ಫ್ರಾಂಚೈಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಇದೇ ವೇಳೆ ನಾಯಕತ್ವ ವಹಿಸಿಕೊಳ್ಳುವ ಬಗ್ಗೆ ಕೂಡ ಮಾತುಕತೆ ನಡೆದಿದೆ ಎಂದು ವರದಿಯಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow