Kantara 1: ಕಾಂತಾರ ಚಾಪ್ಟರ್ ಒನ್ ಚಿತ್ರಕ್ಕೆ ಹೆಚ್ಚಿದ ಬೇಡಿಕೆ! ಟಿವಿ ಹಕ್ಕು ದೊಡ್ಡ ಮಟ್ಟಕ್ಕೆ ಮಾರಾಟ

ಸೆಪ್ಟೆಂಬರ್ 19, 2025 - 20:03
 0  18
Kantara 1: ಕಾಂತಾರ ಚಾಪ್ಟರ್ ಒನ್ ಚಿತ್ರಕ್ಕೆ ಹೆಚ್ಚಿದ ಬೇಡಿಕೆ! ಟಿವಿ ಹಕ್ಕು ದೊಡ್ಡ ಮಟ್ಟಕ್ಕೆ ಮಾರಾಟ

ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಚಿತ್ರದ ಬಿಡುಗಡೆಗೆ ಇನ್ನೇನು ಕೆಲವು ದಿನಗಳು ಮಾತ್ರ ಬಾಕಿಯಿದ್ದು, ಸಿನಿಮಾ ಅಭಿಮಾನಿಗಳ ಕುತೂಹಲ ದಿನೇ ದಿನೇ ಹೆಚ್ಚುತ್ತಿದೆ. ಈ ಚಿತ್ರದ ಟ್ರೇಲರ್ ಸೆಪ್ಟೆಂಬರ್ 22ರಂದು ಮಧ್ಯಾಹ್ನ 12:45ಕ್ಕೆ ಬಿಡುಗಡೆಯಾಗಲಿದೆ.

ಈ ನಡುವೆ ಸಿನಿಮಾದ ಬಿಸ್ನೆಸ್​ಗಳ ಬಗ್ಗೆ ಸುದ್ದಿಗಳು ಹೊರಬಿದ್ದಿವೆ. ಮೂಲಗಳ ಪ್ರಕಾರ, ಚಿತ್ರದ ಸ್ಯಾಟಲೈಟ್ ಹಕ್ಕುಗಳನ್ನು ಜೀ ಕನ್ನಡ ವಾಹಿನಿ ಪಡೆದಿದ್ದು, ಅದಕ್ಕಾಗಿ 80 ಕೋಟಿ ರೂಪಾಯಿ ಪಾವತಿಸಿದೆ ಎಂದು ತಿಳಿದುಬಂದಿದೆ.

‘ಕಾಂತಾರ: ಚಾಪ್ಟರ್ 1’ ಸೂಪರ್‌ಹಿಟ್ ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿ ಬರುತ್ತಿದ್ದು, ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಈ ಸಿನಿಮಾ ಕನ್ನಡ ಮಾತ್ರವಲ್ಲದೆ ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಆದರೆ ಈ 80 ಕೋಟಿ ರೂಪಾಯಿಗಳ ಒಪ್ಪಂದದಲ್ಲಿ ಹಿಂದಿ ಹಾಗೂ ಇತರೆ ಭಾಷೆಗಳ ಹಕ್ಕುಗಳೂ ಸೇರಿದ್ದಾವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

‘ಕಾಂತಾರ’ ಚಿತ್ರದ ಬಜೆಟ್ ಕೇವಲ 15 ಕೋಟಿ ರೂಪಾಯಿ ಆಗಿತ್ತು. ಇದೀಗ ಹೊಸ ಚಿತ್ರದ ಟಿವಿ ಹಕ್ಕಿನಿಂದಲೇ ಐದು ‘ಕಾಂತಾರ’ಗಳನ್ನು ನಿರ್ಮಿಸಲು ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಟ್ರೇಲರ್ ಬಿಡುಗಡೆಯ ನಂತರ ಚಿತ್ರದ ಮೇಲೆ ಇನ್ನಷ್ಟು ನಿರೀಕ್ಷೆಗಳು ಏರಿಕೆಯಾಗಲಿವೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow