Karnataka Budget: ಇನ್ಮುಂದೆ ಎಲ್ಲಾ ಮಲ್ಟಿಪ್ಲೆಕ್ಸ್, ಥಿಯೇಟರ್‌‌ʼಗಳಲ್ಲಿ 200 ರೂ. ಟಿಕೆಟ್ ರೇಟ್ ಫಿಕ್ಸ್!

ಮಾರ್ಚ್ 7, 2025 - 12:25
 0  9
Karnataka Budget: ಇನ್ಮುಂದೆ ಎಲ್ಲಾ ಮಲ್ಟಿಪ್ಲೆಕ್ಸ್, ಥಿಯೇಟರ್‌‌ʼಗಳಲ್ಲಿ 200 ರೂ. ಟಿಕೆಟ್ ರೇಟ್ ಫಿಕ್ಸ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆ 16ನೇ ಬಾರಿಗೆ ಬಜೆಟ್​ ಮಂಡಿಸುತ್ತಿದ್ದಾರೆ. ಬಜೆಟ್​ ಗಾತ್ರ 4 ಲಕ್ಷ ಕೋಟಿ ರೂಪಾಯಿ ದಾಟಿದೆ. 2025-26ನೇ ಸಾಲಿನ ಕರ್ನಾಟಕ ಬಜೆಟ್​ ಗ್ಯಾರಂಟಿಗೆ ಹಣಕಾಸು ಪರಿಸ್ಥಿತಿ ಸರಿದೂಗಿಸಲು ವಿಶೇಷ ಆದ್ಯತೆ ನೀಡುವ ಜೊತೆಗೆ ಹಲವು ಮಹತ್ವ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಇನ್ನೂ ರಾಜ್ಯದಲ್ಲಿರುವ ಎಲ್ಲಾ ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಟಿಕೆಟ್ ದರ 200 ರೂ.ಗಳಿಗೆ ಸೀಮಿತಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.

ಈ ಹಿಂದಿನಿಂದಲೂ ಟಿಕೆಟ್ ದರ ನಿಗದಿ ಪಡಿಸಬೇಕೆಂಬ ಕೂಗು ಕೇಳಿ ಬರುತ್ತಿತ್ತು. ಈಗ ಸರ್ಕಾರ 200 ರೂ. ದರ ನಿಗದಿ ಮಾಡಲು ಮುಂದಾಗಿದೆ. ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯಗಳನ್ನು ಸಿನಿಮಾ ಕ್ಷೇತ್ರಕ್ಕೆ ಸರ್ಕಾರ ಒದಗಿಸಲಿದೆ.

 ಸಾಮಾಜಿಕ, ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್-ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು 3 ಕೋಟಿ ರೂ. ವೆಚ್ಚದಲ್ಲಿ ಚಲನಚಿತ್ರ ಭಂಡಾರವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

           

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow